ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿಧಾನ ಪರಿಷತ್ ಗೆ ಕೋಟ ಎಂಟ್ರಿ; "ಪಂಚಾಯತ್ ರಾಜ್ ಸಬಲೀಕರಣಕ್ಕೆ ದುಡಿಯುವೆ"

ಮಂಗಳೂರು: ದಕ್ಷಿಣ ಕನ್ನಡ ವಿಧಾನ ಪರಿಷತ್ ಹಣಾಹಣಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ (ಬಿಜೆಪಿ) ಗೆಲುವು ಸಾಧಿಸಿದ್ದಾರೆ.

ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, "ಮತದಾರರಿಗೆ ಹಾಗೂ ಒಂದೇ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಂತಹ ಅಭ್ಯರ್ಥಿ ಎಂದರೆ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಎಂದು ಹೇಳಲು ಹೆಮ್ಮೆ ಪಡುತ್ತೇನೆ. ಇದು ನೈಜ ಮತದಾರರ ಗೆಲುವು ಅಂತ ನನಗೆ ಅನಿಸುತ್ತೆ ಮತ್ತು ಇದು ಬಿಜೆಪಿಯ ಪ್ರತಿ ಕಾರ್ಯಕರ್ತರ ಶ್ರಮದ ಫಲ ಎಂದು ನಾನು ಭಾವಿಸುತ್ತೇನೆ. ಎರಡು ಜಿಲ್ಲೆಗಳ ಬಿಜೆಪಿ ಜಿಲ್ಲಾಧ್ಯಕ್ಷರು, ಸಂಸದರಿಗೆ, ಸಿಎಂ ಸಹಿತ ಪಕ್ಷದ ಕಾರ್ಯಕರ್ತರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಕೋಟ, ಪಂಚಾಯತ್ ರಾಜ್ ಇಲಾಖೆಯ ಸಬಲೀಕರಣಕ್ಕಾಗಿ ನಾನು ದುಡಿಯುತ್ತೇನೆ ಎಂದು ಹೇಳಿದರು.

Edited By : Manjunath H D
Kshetra Samachara

Kshetra Samachara

14/12/2021 01:26 pm

Cinque Terre

18.52 K

Cinque Terre

3

ಸಂಬಂಧಿತ ಸುದ್ದಿ