ಉಪ್ಪಿನಂಗಡಿ: ದ.ಕ. ಜಿಲ್ಲೆ ಉಪ್ಪಿನಂಗಡಿಯ ಹಳೆಗೇಟು ಎಂಬಲ್ಲಿ ಹಸಿಮೀನು ಸ್ಟಾಲ್ ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಮೇಲೆ ನಡೆದ ತಲವಾರು ದಾಳಿಗೆ ಸಂಬಂಧಿಸಿ ಪಿಎಫ್ ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆಗಾಗಿ ಠಾಣೆಯಲ್ಲಿರಿಸಿದ್ದರು. ಈ ಘಟನೆಗೆ ಸಂಬಂಧಿಸಿ ಠಾಣೆ ಮುಂಭಾಗ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.
ಉಪ್ಪಿನಂಗಡಿಯ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ ಐ) ಜಿಲ್ಲಾಧ್ಯಕ್ಷ ಹಮೀದ್ ಮೆಜೆಸ್ಟಿಕ್, ಮುಸ್ತಫಾ ಕಡವಿನಬಾಗಿಲು, ಝಕಾರಿಯಾ ಎಂಬವರನ್ನು ತಲವಾರು ದಾಳಿ ಬಗ್ಗೆ ವಿಚಾರಣೆ ನಡೆಸಲು ಪೊಲೀಸರು ವಶಕ್ಕೆ ಪಡೆದಿದ್ದರು. ಇದನ್ನು ಖಂಡಿಸಿ ಪಿಎಫ್ಐ ಕಾರ್ಯಕರ್ತರು ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.
ಇದೇ ವೇಳೆ ಪ್ರತಿಭಟನೆಕಾರರು ರಸ್ತೆಯಲ್ಲೇ ನಮಾಜ್ ಕೂಡ ಮಾಡಿದ್ದರು. ಸಂಜೆಯಾಗುತ್ತಿದ್ದಂತೆಯೇ ಪಿಎಫ್ಐ ಹಾಗೂ ಪೊಲೀಸರ ನಡುವೆ ಹೊಯಿಕೈಯೇ ನಡೆದಿದೆ. ಕೊನೆಗೆ ಜಿಲ್ಲಾಡಳಿತ ಈ ಮೂವರು ಪಿಎಫ್ ಐ ಮುಖಂಡರನ್ನು ಬಿಡುಗಡೆಗೊಳಿಸಿದೆ.
Kshetra Samachara
14/12/2021 09:36 pm