ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಭೇಟಿ ಮಾಡಿ ಚರ್ಚಿಸಲಾಯಿತು.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ಮಂಗಳವಾರ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು.
ಪೊಲೀಸರ ಮೇಲೆ ಹಲ್ಲೆ, ಠಾಣೆಗೆ ಪ್ರವೇಶಿಸಿ ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇದನ್ನು ಸೂಕ್ತ ರೀತಿಯಲ್ಲಿ ಹತ್ತಿಕ್ಕುವ ಕಾರ್ಯ ಇಲಾಖೆಯಿಂದ ಆಗಬೇಕಿದೆ. ಈ ಬಗ್ಗೆ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಲಾಯಿತು.
ನಿಯೋಗದಲ್ಲಿ ಉಸ್ತುವಾರಿ ಸಚಿವರಾದ ಎಸ್.ಅಂಗಾರ , ಶಾಸಕರುಗಳಾದ ಡಾ.ವೈ ಭರತ್ ಶೆಟ್ಟಿ,ಸಂಜೀವ ಮಠಂದೂರು, ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.
Kshetra Samachara
15/12/2021 11:33 am