ಬಂಟ್ವಾಳ: ದ.ಕ., ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನಪರಿಷತ್ಗೆ ಚುನಾಯಿತರಾದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಬಂಟ್ವಾಳದಲ್ಲಿರುವ ಕೇಂದ್ರ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದರು.
ಈ ಸಂದರ್ಭ ಮಾತನಾಡಿದ ಪೂಜಾರಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಜಿಲ್ಲೆಯಲ್ಲೂ ಪಕ್ಷ ಸಂಘಟನೆ ನಡೆಸುವಲ್ಲಿ ಭಂಡಾರಿ ಅವರಿಗೆ ಜವಾಬ್ದಾರಿ ಬಹಳಷ್ಟಿದೆ ಎಂದರು.
Kshetra Samachara
16/12/2021 04:02 pm