ಉಡುಪಿ: ಬೆಳಗಾವಿಯಲ್ಲಿ ಎಂ ಇ ಎಸ್ ಪುಂಡಾಟ ಕೃತ್ಯ ನಿಜಕ್ಕೂ ದುರದೃಷ್ಟಕರ,ಈ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ,ಯಾರೇ ಅಗಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನ ಮಾಡಿರುವುದು ಅಕ್ಷಮ್ಯ ಅಪರಾಧ. ಎಂ ಇ ಎಸ್ ನವರು ಎರಡು ಸಲ ಈ ಥರ ಗಲಾಟೆ ಮಾಡುತ್ತಾರೆ.
ಕನ್ನಡ ರಾಜ್ಯೋತ್ಸವ ಮತ್ತು ಅಧಿವೇಶನದ ವೇಳೆ ಗಲಾಟೆ ಮಾಡುತ್ತಾರೆ.ಸರ್ಕಾರದ ಮೌನವನ್ನು ಸಹಿಸುವುದಿಲ್ಲ. ಸರ್ಕಾರ ಇನ್ನು ಮುಂದೆ ಕಠಿಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Kshetra Samachara
20/12/2021 04:37 pm