ಪುತ್ತೂರು: ಉಪ್ಪಿನಂಗಡಿ ಪೋಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಪೋಲೀಸರ ಮೇಲೆ ದಾಳಿ ಮಾಡಿದ ಆರೋಪಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ವಿಶ್ವಹಿಂದೂ ಪರಿಷತ್ ರಾಜ್ಯ ಸರಕಾರವನ್ನು ಒತ್ತಾಯಿಸಿದೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದೂಬಪರಿಷತ್ ನ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪಿಎಫ್ಐ ಕಾರ್ಯಕರ್ತರು ಕೊಲೆಯತ್ನ ನಡೆಸಿದ ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಡಿಸೆಂಬರ್ 14 ರಂದು ಉಪ್ಪಿನಂಗಡಿ ಪೋಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸುತ್ತಾರೆ ಮತ್ತು ರಾತ್ರಿ ವೇಳೆ ಪೋಲೀಸ್ ಠಾಣೆಗೆ ಮುತ್ತಿಗೆ ಹಾಕಿ ಹಿರಿಯ ಪೋಲೀಸ್ ಅಧಿಕಾರಿಗಳ ಸೇರಿದಂತೆ ಪೋಲೀಸರ ಮೇಲೆ ಹಲ್ಲೆ ನಡೆಸುತ್ತಾರೆ ಎಂದರೆ ವ್ಯವಸ್ಥೆಗಳು ಎಲ್ಲಿ ಸಾಗುತ್ತಿದೆ ಎನ್ನುವ ಆತಂಕ ಸಾರ್ವಜನಿಕರಲ್ಲಿ ಮೂಡಲಾರಂಭಿಸಿದೆ ಎಂದ ಅವರು ಪೋಲೀಸ್ ಠಾಣೆಗೆ ದಾಳಿ ಮಾಡಿದ ಪಿಎಫ್ಐ ಕಾರ್ಯಕರ್ತರ ಮೇಲೆ ದೇಶದ್ರೋಹದ ಕೇಸನ್ನು ತಕ್ಷಣವೇ ದಾಖಲಿಸಬೇಕೆಂದು ಒತ್ತಾಯಿಸಿದ ಅವರು ಉಪ್ಪಿನಂಗಡಿಯ ಮೀನು ಮಾರಾಟ ಮಾಡುತ್ತಿದ್ದವರ ಮೇಲೆ ತಲವಾರು ದಾಳಿ ನಡೆಸಿದ ಪ್ರಮುಖ ಆರೋಪಿಗಳನ್ನು ಪೋಲೀಸರು ಈವರೆಗೂ ಬಂಧಿಸಿಲ್ಲ. ಪೋಲೀಸರು ಕೂಡಲೇ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಹಿಂದೂ ಸಂಘಟನೆಗಳು ಸೇರಿ ಡಿ.ಸಿ. ಕಛೇರಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
Kshetra Samachara
20/12/2021 06:25 pm