ಉಡುಪಿ: ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ 'ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021'ನ್ನು ರಾಜ್ಯ ವಿಧಾನ ಸಭೆಯಲ್ಲಿ ಮಂಡಿಸಿರುವ ನಡೆ ಐತಿಹಾಸಿಕ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ.
ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷದ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನದ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರ ಮತಾಂತರ ಮಾಡುವುದನ್ನು ನಿಷೇಧಿಸುವುದಕ್ಕಾಗಿ ಉಪಬಂಧ ಕಲ್ಪಿಸಲು ಮಂಡಿಸಿರುವ ಈ 'ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021'ನ್ನು ರಾಜ್ಯ ವಿಧಾನ ಸಭೆಯಲ್ಲಿ ಮಂಡಿಸಿರುವುದು ಸ್ವಾಗತಾರ್ಹ. ಈ ಮೂಲಕ ಬಿಜೆಪಿ ನುಡಿದಂತೆ ನಡೆದಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
Kshetra Samachara
21/12/2021 08:25 pm