ಬೆಳಗಾವಿ :ಸುರತ್ಕಲ್ ನೂತನ ಮಾರುಕಟ್ಟೆಯ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿ ಆರಂಭಿಸಬೇಕು ಎಂದು ಮಂಗಳೂರು ನಗರ ಉತ್ತರ ಶಾಸಕರಾಗಿರುವ ಡಾ.ಭರತ್ ಶೆಟ್ಟಿಯವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಮಂಗಳವಾರ ವಿಷಯ ಪ್ರಸ್ತಾಪಿಸಿದರು
ಈ ಕುರಿತು ಸೃಷ್ಟೀಕರಣ ನೀಡಿದ ಕಂದಾಯ ಸಚಿವರಾದ ಮಾನ್ಯ ಅಶೋಕ್ ಅವರು ಆರಂಭದಲ್ಲಿ 61 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಅನುಷ್ಟಾನಕ್ಕೆ ತರಲು ಅಂದಾಜುಪಟ್ಟಿ ತಯಾರಿಸಲಾಗಿತ್ತು. ಪ್ರಸ್ತುತ 14.44 ಕೋಟಿ ರೂಪಾಯಿ ಹೆಚ್ಚುವರಿ ಅನುದಾನದ ಅಗತ್ಯ ಇದ್ದು, ಅದನ್ನು ಲೋಕೋಪಯೋಗಿ ಇಲಾಖೆಗೆ ಕಳುಹಿಸಲಾಗಿತ್ತು. ಈಗ ಅದಕ್ಕೆ ಆರ್ಥಿಕ ಒಪ್ಪಿಗೆ ಸಿಕ್ಕಿದ್ದು, ಶೀಘ್ರದಲ್ಲಿ ನಿರ್ಮಾಣ ಕಾಮಗಾರಿ ಆರಂಭಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು
Kshetra Samachara
22/12/2021 07:55 pm