ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು ಪುರಸಭೆ ಚುನಾವಣೆ ಪ್ರಣಾಳಿಕೆ ಬಿಡುಗಡೆಗೊಳಿಸಿದ ಕೇಂದ್ರ ಸಚಿವೆ ಶೋಭಾ

ಕಾಪು: ಕಾಪು ಪುರಸಭೆಗೆ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಚುನಾವಣೆ ರಂಗೇರತೊಡಗಿದೆ. ಬಿಜೆಪಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು,ಇದೇ ಮೊದಲ ಬಾರಿಗೆ ಪುರಸಭೆಯನ್ನು ತೆಕ್ಕೆಗೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿವೆ. ಇದರ ಭಾಗವಾಗಿ ಇವತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಕಾಪುವಿನಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಕೇಂದ್ರ ಸಚಿವೆ,ಪುರಸಭೆಯ 23 ಸ್ಥಾನಗಳ ಪೈಕಿ 16 ರಿಂದ 17 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು‌. ಈ ಸಂದರ್ಭ ಪಕ್ಷದ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.‌

Edited By : Nagesh Gaonkar
Kshetra Samachara

Kshetra Samachara

23/12/2021 02:10 pm

Cinque Terre

7.85 K

Cinque Terre

0

ಸಂಬಂಧಿತ ಸುದ್ದಿ