ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಸೊತ್ತು ರಕ್ಷಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ : ಮಾಸಿಕ ಸಭೆಯಲ್ಲಿ ಗದ್ದಲ

ಕಾರ್ಕಳ: ಪುರಸಭೆಗೆ ಸೇರಿದ ಸೊತ್ತುಗಳನ್ನು ರಕ್ಷಿಸುವಲ್ಲಿ ಪುರಸಭೆ ಅಧಿಕಾರಿಗಳು ತೀವ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ನೀರು ಸರಬರಾಜು ಮಾಡುತ್ತಿರುವ ಮುಂಡ್ಲಿ ಜಲಾಶಯದ ನೀರು ಸಂಗ್ರಹಾಗಾರಕ್ಕೆ ಹಾಕಿದ್ದ ಸುಮಾರು125 ಕಿಲೋ ಭಾರದ 160 ಗೇಟುಗಳು ಎನಾದವು? ಮಸ್ತಕಾಭಿಷೇಕ ಸಂದರ್ಭದಲ್ಲಿ ಪುರಸಭೆ ಖರೀದಿಸಿದ ಲಕ್ಷಾಂತರ ರೂಪಾಯಿ ಮೌಲ್ಯದ ಓವರ್ ಹೆಡ್ ಟ್ಯಾಂಕ್, ನೀರು ಸರಬರಾಜು ಕೇಂದ್ರಗಳಲ್ಲಿ ಅಳವಡಿಸಿದ ಬಿಡಿಭಾಗಗಳು ಎಲ್ಲಿವೆ? ಎಂದು ವಿಪಕ್ಷ ಮುಖಂಡ ಅಶ್ಪಾಕ್ ಅಹ್ಮದ್ ಪ್ರಶ್ನಿಸಿದರು.

ಕಾರ್ಕಳ ಪುರಸಭೆ ಮಾಸಿಕ ಸಭೆಯಲ್ಲಿ ಮಾತನಾಡಿ ಪುರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ರೂಪಾ ಟಿ ಶೆಟ್ಟಿ, ಈ ಬಗ್ಗೆ ಪೊಲೀಸ್ ಇಲಾಖೆಗೆ ದೂರು ನೀಡಿದ್ದು ಪುರಸಭೆಯ ನೀರು ಸರಬರಾಜು ವಿಭಾಗದ ಅನಿಲ್ ಎಂಬವರನ್ನು ಬಂಧಿಸಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸಭೆಗೆ ತಿಳಿಸಿದರು.

ಕಾರ್ಕಳ ಪುರಸಭಾ ವ್ಯಾಪ್ತಿಯ ಕಾಳಿಕಾಂಬ ಬಳಿಯ ನೂತನ ಉದ್ಯಾನವನಕ್ಕೆ ಮಾಜಿ ಪುರಸಭಾ ಅಧ್ಯಕ್ಷ, ದಿವಂಗತ ಪ್ರದೀಪ್ ಕೋಟ್ಯಾನ್ ಹೆಸರಿಡಬೇಕೆಂದು ಪುರಸಭಾ ಸದಸ್ಯ ಶುಭದ ರಾವ್ ಆಗ್ರಹಿಸಿದರು.

ಕಳೆದ ಸಭೆಯಲ್ಲಿ ಅಂಗಡಿ ಮಳಿಗೆಗಳ ಬಾಡಿಗೆ ಕಲೆಕ್ಷನ್ ನಲ್ಲಿ ಅವ್ಯವಹಾರ ನಡೆದಿದೆ.ಇದರಲ್ಲಿ ನೇರವಾಗಿ ಪುರಸಭೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಆರೋಪ ಮಾಡಿದ್ದು ಮುಂದಿನ ಸಭೆಯಲ್ಲಿ ಅಂತಹ ಅಧಿಕಾರಿಗಳ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ವಿಪಕ್ಷ ಸದಸ್ಯ ಸೋಮನಾಥ ನಾಯ್ಕ ಗಂಭೀರ ಆರೋಪ ಮಾಡಿದ್ದರು.

ಪುರಸಭೆ ಅಧ್ಯಕ್ಷೆ ಸುಮಾ ಕೇಶವ, ಮುಖ್ಯಾಧಿಕಾರಿ ರೂಪಾ ಟಿ ಶೆಟ್ಟಿ, ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ಸ್ಥಾಯೀ ಸಮಿತಿ ಅಧ್ಯಕ್ಷ ಲಕ್ಷ್ಮಿ ನಾರಾಯಣ ಮಲ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

23/12/2021 07:14 pm

Cinque Terre

13.14 K

Cinque Terre

0

ಸಂಬಂಧಿತ ಸುದ್ದಿ