ಕುಂದಾಪುರ:ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಬಿ.ಹಾರೂನ್ ಸಾಹೇಬ್ ನೇಮಕಗೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯ,ಮಾಜಿ ಸಭಾಪತಿ ಕೆ.ಪ್ರತಾಪ್ ಚಂದ್ರ ಶೆಟ್ಟಿ ಅವರ ಸೂಚನೆಯ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರ ಶಿಫಾರಸ್ಸಿನಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಅನುಮೋದನೆಯ ಮೂಲಕ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕದ ಅಲ್ಪ ಸಂಖ್ಯಾತ ಉಪಾಧ್ಯಕ್ಷರಾಗಿ ನೇಮಿಸಿ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಜನಾಬ್ ಇಸ್ಮಾಯಿಲ್ ಆತ್ರಾಡಿ ಆದೇಶಿಸಿದ್ದಾರೆ.
ಹಲವು ವರ್ಷಗಳಿಂದ ಕಟ್ಟಾ ಕಾಂಗ್ರೆಸ್ ಕಾರ್ಯಕರ್ತನಾಗಿ ಗುರುತಿಸಿ ಕೊಂಡಿರುವ ಹಾರೂನ್ ಸಾಹೇಬರು ಮಾಜಿ ಪುರಸಭಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
Kshetra Samachara
24/12/2021 04:01 pm