ಮುಲ್ಕಿ: ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಲ್ಲಿ ಎಲ್ಲಾ ವರ್ಗದವರಿಗೆ ಪ್ರಾಧಾನ್ಯತೆ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಠಗೊಳಿಸುವ ಮೂಲಕ ಚುನಾವಣೆಗಳಿಗೆ ಸಿದ್ದರಾಗುವ ಯೋಜನೆ ರೂಪಿಸಲಾಗಿದೆ ಎಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಹೇಳಿದರು.
ಅವರು ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದರು. ಪಕ್ಷದಲ್ಲಿ ಭಿನ್ನಮತ ಸಹಜ ಎಲ್ಲರನ್ನೂ ಒಗ್ಗೂಡಿಸಿಕೊಂಡು ನಿಷ್ಠಾವಂತರಿಗೆ ಮನ್ನಣೆ ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕಾಗಿದೆ ಎಂದರು.
ಈ ಸಂದರ್ಭ ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
24/12/2021 04:34 pm