ಬೆಳ್ಳಂಪಳ್ಳಿ: ಬೆಳ್ಳಂಪಳ್ಳಿಯ ಜೈ ಹಿಂದ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಿಸದಿದ್ದರೆ ಮಂಗಳವಾರದಿಂದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಇವತ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಊರ ಹಳೆ ವಿದ್ಯಾರ್ಥಿ ಮತ್ತು ಗ್ರಾಮಸ್ಥರು, ಇಲ್ಲಿಯ ಏಕೈಕ ಶಿಕ್ಷಕರಾದ ಶಾಂತಾ ಬಿ. ಎಂಬವರು 31.10.2021ರಂದು ಸೇವೆಯಿಂದ ವಯೋ ನಿವೃತ್ತಿ ಹೊಂದಿದ್ದಾರೆ. ಸದ್ಯ, ಶಾಲೆಯಲ್ಲಿ 73 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಶಿಕ್ಷಕರ ಸಂಖ್ಯೆ ಶೂನ್ಯ! ಇಷ್ಟೊಂದು ಮಕ್ಕಳು ಇದ್ದರೂ ಶಿಕ್ಷಕರಿಲ್ಲದೇ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.
ಊರವರು ಮತ್ತು ಹಳೆ ವಿದ್ಯಾರ್ಥಿಗಳು ಈ ಸಂಬಂಧ ಎಷ್ಟೇ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸೋಮವಾರದೊಳಗೆ ಈ ಸಮಸ್ಯೆ ಬಗೆಹರಿಸದಿದ್ದರೆ ಮಂಗಳವಾರ ವಿದ್ಯಾರ್ಥಿಗಳು ಮತ್ತು ಹಳೆ ವಿದ್ಯಾರ್ಥಿಗಳು ಸೇರಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅನ್ಸಾರ್ ಅಹಮದ್ , ಪ್ರಮೋದ್ ಉಚ್ಚಿಲ್, ನಾಗರಾಜ್ ಹೆಗ್ಡೆ, ತಾರಾನಾಥ ಶೆಟ್ಟಿ ಉಪಸ್ಥಿತರಿದ್ದರು.
Kshetra Samachara
25/12/2021 03:13 pm