ಉಡುಪಿ: ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.
ಬಳಿಕ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು, ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.ಈ ಸಂದರ್ಭ ಉಡುಪಿ ಶಾಸಕ ರಘುಪತಿ ಜೊತೆಗಿದ್ಧರು.
Kshetra Samachara
25/12/2021 07:03 pm