ಬಂಟ್ವಾಳ: ವಿಟ್ಲ ಪಟ್ಟಣ ಪಂಚಾಯಿತಿಯ 18 ವಾರ್ಡುಗಳಿಗೆ ಚುನಾವಣೆ ನಡೆದಿದ್ದು, ಶಾಂತಿಯುತ ಒಟ್ಟು ಶೇ. 73.56 ಮತದಾನವಾಗಿದೆ. ಇದೀಗ ಎಲ್ಲರ ಚಿತ್ತ ಬಂಟ್ವಾಳ ಮೊಡಂಕಾಪುವಿನಲ್ಲಿ ನಡೆಯುವ ಮತ ಎಣಿಕೆಯತ್ತ ನಡೆಯಲಿದ್ದು, 30ರಂದು ಫಲಿತಾಂಶ ದೊರಕಲಿದೆ.
ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಒಕ್ಕೆತ್ತೂರು ಸರ್ಕಾರಿ ಶಾಲೆ, ವಿಠಲ ಪದವಿ ಪೂರ್ವ ಕಾಲೇಜು, ಮೇಗಿನ ಪೇಟೆ, ಬೊಳಂತಿಮೊಗರು, ಸೈಂಟ್ ರೀಟಾ ಶಾಲೆಗಳಲ್ಲಿರುವ ಮತಗಟ್ಟೆಗಳಲ್ಲಿ ಮತದಾನ ನಡೆಯಿತು. ಮತಗಟ್ಟೆಗಳಿಗೆ ಬಿಜೆಪಿ ವತಿಯಿಂದ ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ ನೀಡಿ, ತಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಪ್ರತಿ ಮತಗಟ್ಟೆಗೆ 4ಅಧಿಕಾರಿಗಳು, ಓರ್ವ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಎಎಸ್ಪಿ ಶಿವಾಂಶ್ ರಜಪೂತ್ ಅವರು ಭೇಟಿ ಪರಿಶೀಲಿಸಿದರು. ವಿಟ್ಲ ಪೊಲೀಸ್ ಇನ್ ಸ್ಪೆಕ್ಟರ್ ನಾಗರಾಜ್ ಎಚ್ ಇ ನೇತೃತ್ವದಲ್ಲಿ ಎಸೈಗಳಾದ ಸಂದೀಪ್ ಕುಮಾರ್ ಶೆಟ್ಟಿ, ಸಂಜೀವ ಮತ್ತು ಸಿಬ್ಬಂದಿ ಬಿಗೀ ಬಂದೋ ಬಸ್ತ್ ಏರ್ಪಡಿಸಿದ್ದರು.
Kshetra Samachara
28/12/2021 10:18 am