ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಮಟಾ: ಪೊಲೀಸ್ ದೌರ್ಜನ್ಯಕ್ಕೆ ಸಚಿವ ಕೋಟ ಬೇಸರ; ನೊಂದ ಯುವಕನ ಮದುವೆಗೆ ಹಾಜರು!

ಕುಮಟಾ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕೋಟತಟ್ಟು ಗ್ರಾ.ಪಂ ವ್ಯಾಪ್ತಿಯ ಕೊರಗರ ಕೇರಿಯಲ್ಲಿ ಮೊನ್ನೆ ರಾತ್ರಿ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ಲಾಠಿ ಬೀಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಆ ಕುಟುಂಬದ ರಾಜೇಶ್ ಇಂದು ಕುಮಟಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜೇಶ್ ಮದುವೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗಮಿಸಿ, ನವಜೋಡಿಯನ್ನು ಆಶೀರ್ವದಿಸಿದರು.

ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ನೊಂದ ಕುಟುಂಬದ ವಿವಾಹ ಸಮಾರಂಭದಲ್ಲಿ ಭಾಗಿಯಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಈ ಕೊರಗ ಜನಾಂಗದ ಕುಟುಂಬಗಳನ್ನು ತಾನು ಹತ್ತಿರದಿಂದ ಕಂಡಿದ್ದು, ಅವರೆಲ್ಲರ ಆತ್ಮೀಯತೆ-ವಿಶ್ವಾಸ ಗಳಿಸಿದ್ದೇನೆ. ನನ್ನೂರಿನಲ್ಲಿ ಇರುವ ಏಕೈಕ ಕೊರಗರ ಕೇರಿ ಇದಾಗಿದ್ದು, ಈ ಮುಗ್ಧರ ಮೇಲೆ ಹಲ್ಲೆ ನಡೆದದ್ದು ನೋವಿನ ಸಂಗತಿ. ವಿವಾಹ ಕಾರ್ಯಕ್ರಮವೆಲ್ಲ ಮುಗಿದ ನಂತರ ತಡರಾತ್ರಿ ಆದರೂ ಸಂತ್ರಸ್ತ ಕುಟುಂಬದವರ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಲಿದ್ದೇನೆ ಎಂದರು.

ವಿವಾಹ ಸಮಾರಂಭಕ್ಕೆ ಸಚಿವರು ಬರುತ್ತಲೇ ಡೊಳ್ಳು, ಚೆಂಡೆ ಮೂಲಕ ಸಚಿವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಸಚಿವರ ಜೊತೆ ಕುಮಟಾದ ಹಿರಿಯ ಬಿಜೆಪಿ ಪ್ರಮುಖರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

29/12/2021 09:06 pm

Cinque Terre

15.79 K

Cinque Terre

8

ಸಂಬಂಧಿತ ಸುದ್ದಿ