ಕಾಪು: ಉಡುಪಿ ಜಿಲ್ಲೆಯ ಕಾಪು ಪುರಸಭೆಗೆ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದ್ದು ಇಂದು ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಪುರಸಭೆಯ ಒಟ್ಟು 23 ಸ್ಥಾನಗಳಲ್ಲಿ ಬಿಜೆಪಿ, ಕಾಂಗ್ರೆಸ್ ಜೆಡಿಎಸ್ ಮತ್ತು ಎಸ್ಟಿಪಿಐ ಸ್ಪರ್ಧಿಸಿದೆ.ಕಾಂಗ್ರೆಸ್ ಬಿಜೆಪಿ ಮತ್ತು ಎಸ್ಡಿಪಿಐ ನಡುವೆ ಇಲ್ಲಿ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಇದೀಗ ಮತ ಎಣಿಕೆ ಆರಂಭಗೊಂಡಿದ್ದು ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ಒಂದು ಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರಿಗೆ ಕಾಪು ಪುರಸಭೆ ಗೆಲವು ಪ್ರತಿಷ್ಠೆಯಾಗಿ ಪರಿಣಮಿಸಿದೆ.
Kshetra Samachara
30/12/2021 09:55 am