ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಕಾಪು ಪುರಸಭೆ ಬಿಜೆಪಿ ತೆಕ್ಕೆಗೆ! ಕಾಂಗ್ರೆಸ್ ಗೆ ದ್ವಿತೀಯ ಸ್ಥಾನ

ಕಾಪು: ಉಡುಪಿ ಜಿಲ್ಲೆಯ ಕಾಪು ಪರಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗದ್ದುಗೆಗೆ ಏರಿದ್ದು ,ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.ಕಾಪು ಪುರಸಭೆಯ ಒಟ್ಟು 23 ಸ್ಥಾನಗಳ ಪೈಕಿ ಬಿಜೆಪಿ 12 ಸ್ಥಾನ ಪಡೆದು ಬಹುಮತ ಪಡೆದರೆ ,ಏಳು ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಕೊಂಡಿದೆ.ಇದೇ ಮೊದಲ ಬಾರಿಗೆ ಎಸ್ಡಿಪಿಐಮೂರು ಸ್ಥಾನ ಗೆಲ್ಲುವ ಮೂಲಕ ಖಾತೆ ಓಪನ್ ಮಾಡಿದ್ದರೆ,ಒಂದು ಸ್ಥಾನ ಪಡೆಯುವ ಮೂಲಕ ಜೆಡಿಎಸ್ ಹೀನಾಯ ಸೋಲು ಕಂಡಿದೆ.

ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಪು ಪುರಸಭೆ ಆವರಣದಲ್ಲಿ ಗೆದ್ದ ಅಭ್ಯರ್ಥಿಗಳು ಸಂಭ್ರಮಾಚರಣೆ ಮಾಡಿದರು.

ಇಲ್ಲಿ ಎರಡನೇ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿದೆ.

Edited By : Manjunath H D
Kshetra Samachara

Kshetra Samachara

30/12/2021 10:01 am

Cinque Terre

8.74 K

Cinque Terre

1

ಸಂಬಂಧಿತ ಸುದ್ದಿ