ಮಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಮೂಲಕ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಉಳಿಸಿಕೊಂಡಿದೆ ಎಂದು ಮಂಗಳೂರಿನಲ್ಲಿಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ವಿಚಾರವಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿದೆ. ರಾಜ್ಯದಲ್ಲಿ ಕಳೆದ ಬಾರಿಗಿಂತ ಉತ್ತಮ ಫಲಿತಾಂಶ ದೊರಕಿದೆ. ಆದರೆ ಓರ್ವ ಪಕ್ಷೇತರ ಅಭ್ಯರ್ಥಿ ಚುನಾವಣಾ ಕಣದಲ್ಲಿದ್ದರೂ ಮತಗಳಲ್ಲಿ ವ್ಯತ್ಯಾಸವಾಗುತ್ತದೆ. ಫಲಿತಾಂಶ ವಿರುದ್ಧ ಬರುತ್ತದೆ. ಆದರೂ ಬಿಜೆಪಿಗೆ ಉತ್ತಮವಾದ ಫಲಿತಾಂಶ ದೊರಕಿದೆ ಎಂದು ಹೇಳಿದರು.
ಸಂಜೆ ಹೊತ್ತಿಗಿನ ಪೂರ್ಣ ಫಲಿತಾಂಶದ ಬಳಿಕ ಬಿಜೆಪಿ ಉತ್ತಮವಾಗಿ ಗೆದ್ದು ಬರಲಿದೆ. ಚಿಕ್ಕಮಗಳೂರು, ಉತ್ತರ ಕರ್ನಾಟಕ ಭಾಗದ ಹಲವೆಡೆ ಬಿಜೆಪಿ ಈ ಬಾರಿ ಗೆಲುವು ಸಾಧಿಸಿದೆ.ಈ ಫಲಿತಾಂಶ ಖಂಡಿತವಾಗಿಯೂ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಲ್ಲ. ಗ್ರಾ.ಪಂ, ಪ.ಪಂಗಳು ಯಾವುದೇ ಚುನಾವಣೆಯ ದಿಕ್ಸೂಚಿಯಾಗಲು ಸಾಧ್ಯವಿಲ್ಲ. ಆದರೂ ಬಿಜೆಪಿ ಒಳ್ಳೆಯ ಫಲಿತಾಂಶ ಕೊಟ್ಟಿದೆ ಎಂದೆನಿದುತ್ತಿದೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
Kshetra Samachara
30/12/2021 03:11 pm