ಮುಲ್ಕಿ: ಮುಲ್ಕಿ-ಮೂಡಬಿದ್ರೆ ಮಾಜಿ ಶಾಸಕ ಅಭಯಚಂದ್ರ ಜೈನ್ ರ 2003 ಅವಧಿಯಲ್ಲಿ ಕಿನ್ನಿಗೋಳಿ-ಕಟೀಲು ಮೆನ್ನಬೆಟ್ಟು ಪಂಚಾಯತ್ ಸೇರಿಸಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮಾಡಲು ನಿರ್ಣಯವಾಗಿದ್ದು ಗ್ರಾಮಸಭೆಯಲ್ಲಿ ಗ್ರಾಮಸ್ಥರ ಬೆಂಬಲದಿಂದ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಘೋಷಣೆಯಾಗಿದೆ ಆದರೆ ಈಗ ಕಟೀಲು ಮೆನ್ನಬೆಟ್ಟು ಗ್ರಾಮದ ಕೆಲ ಸಾರ್ವಜನಿಕರು ಸೂಕ್ತ ಮಾಹಿತಿಯಿಲ್ಲದೆ ಈ ಬಗ್ಗೆ ಗೊಂದಲದಲ್ಲಿದ್ದಾರೆ.
ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಭಿವೃದ್ಧಿಯಾಗಲು ಅನೇಕ ಯೋಜನೆಗಳನ್ನು ರೂಪಿಸಿದ್ದು ಸಾರ್ವಜನಿಕರ ಯಾವುದೇ ಸಮಸ್ಯೆಗಳನ್ನು ಬಗೆಹರಿಸಲು ಸಿದ್ದ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಅವರು ಕಿನ್ನಿಗೋಳಿಯ ಯುಗಪುರುಷ ದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪಟ್ಟಣ ಪಂಚಾಯತ್ ಆದರೆ ಸಾರ್ವಜನಿಕರಿಗೆ ತೆರಿಗೆ ಸಹಿತ ಮೂಲಭೂತ ಸೌಕರ್ಯಗಳ ಹೊರೆಗಳನ್ನು ಕಡಿಮೆ ಮಾಡಲು ಈಗಾಗಲೇ ಮುಖ್ಯಾಧಿಕಾರಿಗಳಿಗೆ ಸೂಚಿಸಿದ್ದು ಯಾರು ಭಯಪಡಬೇಕಾದ ಅಗತ್ಯವಿಲ್ಲ ಎಂದರು.
ಬೆಳೆಯುತ್ತಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತ ಅಭಿವೃದ್ಧಿಗೆ ಈಗಾಗಲೇ 15 ಕೋಟಿ ಅನುದಾಕ್ಕೆ ಸರಕಾರಕ್ಕೆ ಬೇಡಿಕೆ ಸಲ್ಲಿಸಿದ್ದು ಶೀಘ್ರ ಅನುಷ್ಠಾನಗೊಳ್ಳುವ ನಿರೀಕ್ಷೆ ಇದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಸುನಿಲ್ ಆಳ್ವ, ದಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಈಶ್ವರ ಕಟೀಲು, ಪದಾಧಿಕಾರಿಗಳಾದ ಕೇಶವ ಕಟೀಲು ಭುವನಾಭಿರಾಮ ಉಡುಪ ಉಪಸ್ಥಿತರಿದ್ದರು.
Kshetra Samachara
01/01/2022 07:13 pm