ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಪ.ಪಂ.ನಲ್ಲಿ ಭರ್ಜರಿ ಗೆಲುವು ಹಿನ್ನೆಲೆ; ಬಿಜೆಪಿ ವಿಜಯೋತ್ಸವ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ ವಿಟ್ಲದಲ್ಲಿ ನಡೆಯಿತು.

ಇತ್ತೀಚೆಗೆ ನಡೆದ ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಯ 18 ವಾರ್ಡ್ ಗಳಲ್ಲಿ 12 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಪಟ್ಟಣ ಪಂಚಾಯತ್ ಆಡಳಿತ ಬಿಜೆಪಿ ತೆಕ್ಕೆಗೆ ಬಂದಿದೆ.

ವಿಟ್ಲ ಜೈನ ಬಸದಿ ವತಿಯಿಂದ ಬ್ಯಾಂಡ್, ವಾದ್ಯ, ಚೆಂಡೆ ಗಳೊಂದಿಗೆ ವಿಟ್ಲ ಮುಖ್ಯ ರಸ್ತೆಯಲ್ಲಿ ಸಾಗಿದ

ಮೆರವಣಿಗೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ವಿವಿಧ ಕ್ಷೇತ್ರಗಳ ಬಿಜೆಪಿ ಮುಖಂಡರು, ಅಭ್ಯರ್ಥಿಗಳು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

02/01/2022 07:25 pm

Cinque Terre

20.9 K

Cinque Terre

0

ಸಂಬಂಧಿತ ಸುದ್ದಿ