ಮಂಗಳೂರು: ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ನ ಹೀನ ರಾಜಕಾರಣ. ಕೊರೊನಾ 1- 2 ಅಲೆಗಳ ಸಂದರ್ಭ ಕಾಂಗ್ರೆಸ್ ಟೀಕೆ ಮಾಡಿರೋದನ್ನು ಬಿಟ್ಟರೆ ಬೇರೆ ಯಾವ ಕೆಲಸವನ್ನೂ ಮಾಡಿಲ್ಲ. ಜನರನ್ನು ದಾರಿ ತಪ್ಪಿಸುವ ಕೆಲಸದ ಜತೆಗೆ ಕಾಂಗ್ರೆಸ್ ಜನರನ್ನು ಕೊಲ್ಲುವ ಕಾರ್ಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಸರಕಾರ ಇರುವಾಗ ಯಾಕೆ ಮೇಕೆದಾಟು ಬಗ್ಗೆ ಚರ್ಚೆಯಾಗಿಲ್ಲ? ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆ ಕಾರ್ಯರೂಪಕ್ಕೆ ತರಲು ಸಂಪೂರ್ಣ ಬದ್ಧವಾಗಿದ್ದು, ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನೂ ಮಾಡಿದೆ. ಮೇಕೆದಾಟು ಯೋಜನೆ ನಾವು ಮಾಡಿಯೇ ಮಾಡುತ್ತೇವೆ. ಅದಕ್ಕೆ ಕಾಂಗ್ರೆಸ್ ನವರ ಪಾದಯಾತ್ರೆ ಅಗತ್ಯವಿಲ್ಲ ಎಂದರು.
ಕಾಂಗ್ರೆಸ್ ರಾಜಕೀಯ ಲಾಭಕ್ಕೋಸ್ಕರ ನಾಟಕ ಮಾಡುತ್ತಿದೆ. ಅಲ್ಲದೆ, ಅವರೆಲ್ಲ ಮೇಕೆದಾಟು ಪಾದಯಾತ್ರೆ ಮಾಡುವ ಮೂಲಕ ಕೊರೊನಾವನ್ನು ಹೆಚ್ಚು ಮಾಡಲು ಹೊರಟಿದ್ದಾರೆ ಎಂದು ನಳಿನ್ ವಾಗ್ದಾಳಿ ನಡೆಸಿದರು.
PublicNext
03/01/2022 03:29 pm