ಕುಂದಾಪುರ: ಕೋಟದಲ್ಲಿ ಕೊರಗ ಸಮುದಾಯದ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕುಂದಾಪುರ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಶ್ರೀಧರ್ ನಾಡ, ಕಳೆದ ಹಲವು ದಶಕಗಳಿಂದ ಕೊರಗ ಸಮುದಾಯದ ಜನಸಂಖ್ಯೆ ಅತ್ಯಂತ ಗಂಭೀರ ಸ್ಥಿತಿಯಲ್ಲಿ ಕಡಿಮೆ ಆಗುತ್ತಿದೆ. ಸಮುದಾಯ ವಿನಾಶದ ಅಂಚಿಗೆ ಸರಿದಿದೆ. ಸಮುದಾಯದ ವಿನಾಶದೊಂದಿಗೆ ಭಾಷೆ, ಬದುಕು, ಕಲೆ, ಸಂಸ್ಕೃತಿ ನಾಶವಾಗಲಿದೆ ಎಂದು ಹೇಳಿದರು.
ದೌರ್ಜನ್ಯ ಎಸಗಿರುವ ಎಸ್ಸೈ ಅಮಾನತು ಮಾಡಿದ ಕ್ಷಣ ಶಿಕ್ಷೆ ಆಗಿದೆ ಎಂದು ಅರ್ಥವಲ್ಲ. ಸಂಬಂಧಿಸಿದ ಪೊಲೀಸರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಕೇಸು ದಾಖಲಿಸಿ ಬಂಧಿಸಬೇಕು. ನೊಂದ ಕೊರಗ ಸಮುದಾಯದ ಬಂಧುಗಳಿಗೆ ಪೂರ್ಣ ಪ್ರಮಾಣದ ಪರಿಹಾರ ಕೂಡಲೇ ನೀಡಬೇಕು. ದೌರ್ಜನ್ಯ ನಡೆಸಿರುವ ಪೊಲೀಸ್ ಅಧಿಕಾರಿಗಳು ಇಡೀ ಕೊರಗ ಸಮುದಾಯದ ಜೊತೆ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದರು.
Kshetra Samachara
04/01/2022 11:46 am