ಉಡುಪಿ: ಸಂಸದ ಡಿಕೆ ಸುರೇಶ್ ಸಿಎಂ ಇದ್ದ ವೇದಿಕೆಯಲ್ಲಿ ದುರ್ವರ್ತನೆ ನಡೆಸಿದ್ದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು.
ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಡಿಕೆ ಸುರೇಶ್ ವಿರುದ್ಧ ಘೋಷಣೆಗಳನ್ನು ಕೂಗಿದರು.ಪ್ರಜಾಪ್ರಭುತ್ವಕ್ಕೆ ಕಾಂಗ್ರೆಸ್ ಮಾರಕ. ಅಂಬೇಡ್ಕರ್ ಗೆ ಡಿ ಕೆ ಸುರೇಶ್ ಅವಮಾನ ಮಾಡಿದ್ದಾರೆ.
ರಾಮನಗರದಲ್ಲಿ ಕಾಂಗ್ರೆಸ್ ಗುಂಡಾಗಿರಿ ಅಕ್ಷಮ್ಯ ಅಪರಾಧ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ, ಮಹೇಶ್ ಟಾಗೋರ್, ಗೀತಾಂಜಲಿ ಸುವರ್ಣ ಮತ್ತಿತರರಿದ್ದರು.
Kshetra Samachara
04/01/2022 07:36 pm