ಉಡುಪಿ: ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ, ಹಿಂದೂ ದೇವಸ್ಥಾನಗಳ ಸ್ವಾಯತ್ತೆ ಮುಂತಾದ ಜನಪರ ಕಾಯ್ದೆ ಕಾನೂನುಗಳಿಗೆ ಉದ್ದೇಶಪೂರ್ವಕವಾಗಿ ಅಡ್ಡಿ ಪಡಿಸಿ ವಿರೋಧಿಸುವ ಮೂಲಕ ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮಗದೊಮ್ಮೆ ಸಾಬೀತುಪಡಿಸಿದೆ. ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯವಾಗಿದ್ದು ಜನತೆ ಜಾಗರೂಕರಾಗಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಮುಂಬರಲಿರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಕಾರ್ಯಪ್ರವೃತ್ತವಾಗಲಿದೆ. ಆಯಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪಕ್ಷದ ಕಾರ್ಯಕರ್ತರಿಗೆ ಅವಕಾಶಗಳು ಸಿಗಲಿವೆ. ಹಿಂದುಳಿದ ವರ್ಗಕ್ಕೆ ಸ್ವಾಭಾವಿಕವಾಗಿ ಹೆಚ್ಚಿನ ಅವಕಾಶಗಳಿವೆ ಎಂದರು.
Kshetra Samachara
05/01/2022 07:39 pm