ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಾಜ್ಯ ಬಿಜೆಪಿ ನೂತನ ಉಪಾಧ್ಯಕ್ಷೆ ನಯನಾ ಗಣೇಶ್ ಗೆ ಜಿಲ್ಲಾ ಸನ್ಮಾನ

ಉಡುಪಿ: ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ನಯನಾ ಗಣೇಶ್ ಉದ್ಯಾವರ ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯಲ್ಲಿ ಸನ್ಮಾನಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ನಯನಾ ಗಣೇಶ್ ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ವಿವಿಧ ಸ್ತರದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಇದೀಗ ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವುದು ಸಂತಸ ತಂದಿದೆ. ರಾಜ್ಯ ತಂಡದಲ್ಲಿ ಉಡುಪಿ ಜಿಲ್ಲೆಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿರುವ ರಾಜ್ಯ ಬಿಜೆಪಿಗೆ ಅಭಿನಂದನೆಗಳು. ಉಡುಪಿ ಜಿಲ್ಲೆಗೆ ರಾಜ್ಯ ಉಪಾಧ್ಯಕ್ಷರ ಸ್ಥಾನ ದೊರೆತಿರುವುದು ಹೆಮ್ಮೆ ತಂದಿದೆ. ನಯನಾ ಗಣೇಶ್ ರವರು ರಾಜ್ಯ ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಅತ್ಯಂತ ಸಮರ್ಪಕವಾಗಿ ನಿಭಾಯಿಸುವಂತಾಗಲಿ ಎಂದು ಶುಭ ಹಾರೈಸಿದರು.

Edited By : PublicNext Desk
Kshetra Samachara

Kshetra Samachara

08/01/2022 04:10 pm

Cinque Terre

1.64 K

Cinque Terre

0

ಸಂಬಂಧಿತ ಸುದ್ದಿ