ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಸಸಿಹಿತ್ಲು ಮುಂಡಾ ಬೀಚ್ ಅಭಿವೃದ್ಧಿಗೆ ಶೀಘ್ರ ಕಾಯಕಲ್ಪ: ನಳಿನ್ ಕುಮಾರ್ ಕಟೀಲ್

ಮುಲ್ಕಿ: ಅಂತರಾಷ್ಟ್ರೀಯ ಸರ್ಫಿಂಗ್ ಖ್ಯಾತಿಯ ಹಳೆಯಂಗಡಿ ಸಮೀಪದ ಸಸಿಹಿತ್ಲು ಮುಂಡಾ ಬೀಚ್ ಅಭಿವೃದ್ಧಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಕರ್ನಾಟಕ ಸರಕಾರದ ಉದ್ಯಮವಾದ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯೊಂದಿಗೆ ಜೊತೆಯಾಗಿ ಶೀಘ್ರ ಕಾಯಕಲ್ಪ ಒದಗಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಹಳೆಯಂಗಡಿ ಸಮೀಪದ ಸಸಿಹಿತ್ಲು ಮುಂಡಾ ಬೀಚ್ ಪರಿಶೀಲಿಸಿ ಮಾತನಾಡಿದರು.

ಈ ಬಗ್ಗೆ ದ ಕ ಜಿಲ್ಲೆಯ ತಣ್ಣೀರುಬಾವಿ ಹಾಗೂ ಸಸಿಹಿತ್ಲು ಮುಂಡಾ ಬೀಚ್ ಪರಿಸರದಲ್ಲಿ ಮೂರು ಎಕರೆ ಜಾಗವನ್ನು ಸ್ಥಳ ಪರಿಶೀಲನೆ ಮಾಡಿದ್ದು ಬೀಚ್ ಅಭಿವೃದ್ಧಿಗೆ ಉತ್ತೇಜನ ನೀಡಲಾಗುವುದು ಎಂದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಮಾತನಾಡಿ ಜಿಲ್ಲಾಡಳಿತದ ವತಿಯಿಂದ ಬೀಚ್ ನಲ್ಲಿ ಟೂರಿಸಂ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದ್ದು ಸರಕಾರಿ ಉದ್ಯಮವಾದ ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ ಸಹಯೋಗದೊಂದಿಗೆ ಕಾರವಾರದಲ್ಲಿ ಅಭಿವೃದ್ಧಿ ಹೊಂದಿರುವ ಬೀಚ್ ಗೆ ಸರಿಸಮಾನಾಗಿ ಸಸಿಹಿತ್ಲು ಮುಂಡಾ ಬೀಚ್ ನಲ್ಲಿ ಸಮುದ್ರ ಕೊರೆತಕ್ಕೆ ತಡೆಗೋಡೆ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಬೀಚ್ ಅಭಿವೃದ್ಧಿಗೆ ಶೀಘ್ರ ಕಾಯಕಲ್ಪ ನೀಡಲಾಗುವುದು ಎಂದರು.

ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್,

ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ ನ ಅಧ್ಯಕ್ಷ ಎಂ. ಅಪ್ಪಣ್ಣ, ಹಳೆಯಂಗಡಿ ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ, ಉಪಾಧ್ಯಕ್ಷ ಅಶೋಕ್ ಬಂಗೇರ,ಸದಸ್ಯರಾದ ವಿನೋದ್, ಮಲ್ಲಿಕಾ, ಚಂದ್ರಿಕಾ, ಸವಿತಾ,ತಾ. ಪಂ.ಮಾಜಿ ಸದಸ್ಯ ಜೀವನ್ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

09/01/2022 07:46 pm

Cinque Terre

15.15 K

Cinque Terre

1

ಸಂಬಂಧಿತ ಸುದ್ದಿ