ಮೂಡಬಿದ್ರಿ: ಗೋವಿನ ತಲೆ ರಸ್ತೆ ಬದಿ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಗುರುವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಭೇಟಿ ಮನವಿ ಸಲ್ಲಿಸಿದೆ.
ಮೂಡಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೀರ್ತಿ ನಗರದಲ್ಲಿ ದುಷ್ಕರ್ಮಿಗಳು ಗೋವಿನ ರುಂಡವನ್ನು ಗೋಣಿ ಚೀಲದಲ್ಲಿ ಕಟ್ಟಿ ರಸ್ತೆ ಬದಿಯಲ್ಲಿ ಬಿಸಾಡಿ ಸಮಾಜದಲ್ಲಿ ಶಾಂತಿ ಕೆಡಿಸುವ ಪ್ರಯತ್ನ ಮಾಡಲಾಗಿದೆ. ಅಲ್ಲದೆ, ಪರಿಸರದಲ್ಲಿ ನಿರಂತರ ಗೋ ಕಳ್ಳತನ ನಡೆಯುತ್ತಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಲೇರಿಯನ್ ಸಿಕ್ವೇರಾ, ರಾಜೇಶ್ ಕಡಲೆಕೆರೆ, ಪುರಂದರ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
13/01/2022 03:32 pm