ಮುಲ್ಕಿ; ಮುಲ್ಕಿ ಸಮೀಪದ ಕಿಲ್ಪಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ರವರನ್ನು ಏಕಾಏಕಿ ರಾಜಕೀಯ ದುರುದ್ದೇಶದಿಂದ ವರ್ಗಾವಣೆ ಮಾಡಲಾಗಿದ್ದು ಕೂಡಲೇ ವರ್ಗಾವಣೆಯನ್ನು ರದ್ದು ಗೊಳಿಸಬೇಕು ಎಂದು ಕಿಲ್ಪಾಡಿ ಪಂಚಾಯತ್ ಉಪಾಧ್ಯಕ್ಷ ಗೋಪಿನಾಥ ಪಡಂಗ ಸಂಬಂಧಪಟ್ಟ ಆಡಳಿತ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಅವರು ಮೂಲ್ಕಿಯ ಪುನರೂರು ಟೂರಿಸ್ಟ್ ಹೋಮ್ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಳೆದ 8 ತಿಂಗಳ ಹಿಂದೆ ಕಿಲ್ಪಾಡಿ ಗ್ರಾಮ ಪಂಚಾಯತಿಗೆ ನೇಮಕವಾದ ನೂತನ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ರವರನ್ನು ಏಕಾಏಕಿ ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದೇಶದ ಮೇರೆಗೆ ವರ್ಗಾವಣೆ ಮಾಡಿದ್ದು ಪ್ರಾಮಾಣಿಕ ,ಭ್ರಷ್ಟಾಚಾರರಹಿತ ಅಧಿಕಾರಿಗಳಿಗೆ ಬೆಲೆ ಇಲ್ಲದ ಪರಿಸ್ಥಿತಿ ಎದುರಾಗಿದೆ.
ಕಿಲ್ಪಾಡಿ ಗ್ರಾಮ ಪಂಚಾಯತಿಯಲ್ಲಿ ಪೂರ್ಣಿಮಾ ರವರು ಪಂಚಾಯತ ಅಧಿಕಾರಿಯಾಗಿ ಬಂದಮೇಲೆ ಕಳೆದ ಎಂಟು ತಿಂಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಕೆಲ ದುಷ್ಟರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಕೂಡಲೇ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ವರ್ಗಾವಣೆಯನ್ನು ರದ್ದುಗೊಳಿಸಬೇಕು ಇಲ್ಲದಿದ್ದರೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ದೂರು ನೀಡುವುದಲ್ಲದೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
Kshetra Samachara
19/01/2022 06:55 pm