ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕಾಂಗ್ರೆಸಿಗರು ಉರಿಯುವ ಬೆಂಕಿಯಲ್ಲಿ ಮೈ ಕಾಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ: ಸಚಿವ ಸುನಿಲ್ ಟೀಕೆ!

ಉಡುಪಿ : ಲೇಡಿ ಹಿಲ್ ವೃತ್ತಕ್ಕೆ ಮಹರ್ಷಿ ನಾರಾಯಣ ಗುರು ಹೆಸರಿಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಣಯ ತೆಗೆದುಕೊಂಡಾಗ ಕಾಂಗ್ರೆಸ್ ನವರು ವಿರೋಧ ಮಾಡಿದ್ದರು. ಈಗ ನಾರಾಯಣ ಗುರುಗಳ ಹೆಸರನ್ನು ಸಮಾಜ ವಿಭಜಿಸುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಕನ್ನಡ- ಸಂಸ್ಕೃತಿ ಮತ್ತು ಇಂಧನ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಆರೋಪಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ತೆಗೆದುಕೊಂಡ ನಿರ್ಣಯವನ್ನು ಕಾಂಗ್ರೆಸ್ ವಿರೋಧಿಸಿದ್ದರ ಬಗ್ಗೆ ಸಾಕಷ್ಟು ದಾಖಲೆಗಳಿವೆ. ಆದರೆ ಆ ಸಮಯದಲ್ಲಿ ಕಾಂಗ್ರೆಸ್ ಮುಖಂಡರು ಮೌನಕ್ಕೆ ಶರಣಾಗಿದ್ದು ಏಕೆ ? ನಾರಾಯಣ ಗುರುಗಳ ಬಗ್ಗೆ ನಿಮಗೆ ಆಗ ಗೌರವ ಇರಲಿಲ್ಲವೇ ? ಕೇರಳ ಸರಕಾರ ಸೃಷ್ಟಿಸಿದ ತಪ್ಪನ್ನು ನೀವ್ಯಾಕೆ ಪೋಷಿಸುತ್ತೀರಿ ? ಎಂದು ಪ್ರಶ್ನಿಸಿದ್ದಾರೆ.

ಹಿಂದು ಮಹಾಪುರುಷರ ಬಗ್ಗೆ ನಿಮ್ಮ ಗೌರವ ಹಾಗೂ ಕಾಳಜಿ ಸಾಂದರ್ಭಿಕವಾಗಿರುತ್ತದೆ. ಎಲ್ಲಿ ರಾಜಕೀಯ ಲಾಭ ಸಿಗುತ್ತದೋ ಆ ಸಂದರ್ಭದಲ್ಲಿ ಮಾತ್ರ ಅನಾವರಣವಾಗುತ್ತದೆ. ನಿಮ್ಮ ಶಾಶ್ವತ ಪ್ರೀತಿ ಯಾರ ಕಡೆಗೆ ಎಂಬುದನ್ನು ಮತ್ತೆ ಮತ್ತೆ ಹೇಳಬೇಕಾದ ಅಗತ್ಯವಿಲ್ಲ ಎಂದು ಟೀಕಿಸಿದ್ದಾರೆ.

ಕೇಂದ್ರ ಸರಕಾರದ ವಿರುದ್ಧ ಅನಗತ್ಯ ಅಪಪ್ರಚಾರದ ಜತೆಗೆ ಸಮಾಜ ಒಡೆಯುವ ಕೃತ್ಯಕ್ಕೆ ಪ್ರೇರಣೆ ನೀಡುವುದಕ್ಕಾಗಿ ಮಹರ್ಷಿ ನಾರಾಯಣ ಗುರು ಸ್ಥಬ್ದ ಚಿತ್ರ ವಿಚಾರವನ್ನು ಕೇರಳದ ಕಮ್ಯುನಿಷ್ಟ್ ಸರಕಾರ ಬಳಸಿಕೊಳ್ಳುತ್ತಿದ್ದು ವಿಪಕ್ಷದವರು ಉರಿಯುವ ಬೆಂಕಿಯಲ್ಲಿ ಮೈ ಕಾಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಗಣರಾಜ್ಯೋತ್ಸವ ಪರೇಡ್ ಗೆ ಸ್ಥಬ್ದಚಿತ್ರಗಳನ್ನು ಆಯ್ಕೆ ಮಾಡುವುದು ಕೇಂದ್ರ ಸರಕಾರವಲ್ಲ. ರಕ್ಷಣಾ ಇಲಾಖೆಯ ಉನ್ನತ ಅಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿ ಸ್ಥಬ್ದಚಿತ್ರಗಳನ್ನು ಆಯ್ಕೆ ಮಾಡುತ್ತದೆ. ಕೇರಳ ಸರಕಾರ ವಿವಾದ ಸೃಷ್ಟಿಸಬೇಕೆಂಬ ಉದ್ದೇಶದಿಂದಲೇ ನಿಯಮ ಉಲ್ಲಂಘಿಸಿ ಜಟಾಯು, ಮಹರ್ಷಿ ನಾರಾಯಣಗುರು ಹಾಗೂ ಶಂಕರಾಚಾರ್ಯರನ್ನು ವಿವಾದದಲ್ಲಿ ಎಳೆದು ತಂದಿದೆ. ನಿಯಮ ಉಲ್ಲಂಘನೆ ಮಾಡಿದ ಕೇರಳದ ಕಮ್ಯುನಿಷ್ಟ್ ಸರಕಾರ ಈಗ ಈ ವಿಚಾರವನ್ನು ಸಮಾಜವನ್ನು ಒಡೆಯುವುದಕ್ಕೆ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ.

Edited By : Manjunath H D
PublicNext

PublicNext

24/01/2022 12:44 pm

Cinque Terre

24.35 K

Cinque Terre

4

ಸಂಬಂಧಿತ ಸುದ್ದಿ