ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಡದೋಣಿ ಮೀನುಗಾರರಿಗೆ ಸೀಮೆ ಎಣ್ಣೆ ಬಿಡುಗಡೆ:ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿರಲಿಲ್ಲ. ಈ ಕುರಿತು ಕೇಂದ್ರ ಸರಕಾರದ ಗಮನ ಸೆಳೆದು ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕು, ಈ ಮೂಲಕ ಕರಾವಳಿಯ ಮೀನುಗಾರರ ಹಿತವನ್ನು ಕಾಯಬೇಕು ಎಂದು ಉಡುಪಿಯ ಮೀನುಗಾರರ ಒಕ್ಕೂಟ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಮನವಿಯನ್ನು ಸಲ್ಲಿಸಿತ್ತು.

ರಾಜ್ಯದಲ್ಲಿ 10,100 ಕ್ಕೂ ಅಧಿಕ ನಾಡದೋಣಿಗಲಿದ್ದು, 60,000 ಕ್ಕಿಂತಲೂ ಹೆಚ್ಚಿನ ಮೀನುಗಾರರ ಜೀವನಾಧಾರವಾಗಿದೆ, ಕೇಂದ್ರ ಸರಕಾರ ನೀಡುವ ಸೀಮೆ ಎಣ್ಣೆಯ ಮೇಲೆ ಈ ನಾಡ ದೋಣಿ ಮೀನುಗಾರಿಕೆಯು ಅವಲಂಬಿತವಾಗಿದೆ.

ಕರಾವಳಿಯ ಮೀನುಗಾರರ ಈ ಮನವಿಯನ್ನು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವರ ಗಮನಕ್ಕೆ ತಂದು, ಶೀಘ್ರ ಹೆಚ್ಚುವರಿ ಸೀಮೆ ಎಣ್ಣೆಯನ್ನು ಕರ್ನಾಟಕ ರಾಜ್ಯಕ್ಕೆ ಬಿಡುಗಡೆಗೊಳಿಸಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚುವರಿಯಾಗಿ ದೊರೆತಿರುವ ಸೀಮೆ ಎಣ್ಣೆಯನ್ನು ಮೀನುಗಾರಿಕಾ ಉದ್ದೇಶಕ್ಕೆ ವಿತರಿಸಲಿರುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

24/01/2022 08:47 pm

Cinque Terre

6.1 K

Cinque Terre

6

ಸಂಬಂಧಿತ ಸುದ್ದಿ