ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ಗೊಂದಲ, ಒಡಕು ಸೃಷ್ಟಿʼ

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ವಿಷಾದನೀಯ ಎಂದು ಬಿರುವೆರ್ ಕುಡ್ಲ ಆರೋಪಿಸಿದೆ.

"ಶ್ರೀ ನಾರಾಯಣ ಗುರುಗಳು ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿನ ವಿರುದ್ಧ ಹೋರಾಟ ನಡೆಸಿದವರು. ಶ್ರೀ ಗುರುಗಳು ಸಮಾಜ ಸುಧಾರಕರಾಗಿ ಸಮಾಜದ ತಾರತಮ್ಯಗಳನ್ನು ನಿವಾರಿಸುವ ಜೊತೆಗೆ ಸಮಾಜದಲ್ಲಿ ಧರ್ಮ, ಅಧ್ಯಾತ್ಮ ಜಾಗೃತಿಯನ್ನೂ ಮೂಡಿಸಿದ ಮಹಾತ್ಮರು. ದೆಹಲಿ ಗಣರಾಜ್ಯೋತ್ಸವಕ್ಕಾಗಿ ಕೇರಳ ಸರಕಾರ ಕಳುಹಿಸಿದ ಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ಕಡೆಗಣಿಸಿದೆ ಎಂಬ ಆರೋಪದ ಮೂಲಕ ವಿವಾದ ಸೃಷ್ಟಿಸಿ ಹೇಗಾದರೂ ಮಾಡಿ ಅಧಿಕಾರ ಪಡೆಯಬೇಕೆಂಬ ದುರುದ್ದೇಶದಿಂದ ಕೂಡಿದ ವಿಪಕ್ಷಗಳು ಜನರ ಮನಸ್ಸಿನಲ್ಲಿ ಗೊಂದಲ ಉಂಟು ಮಾಡಲೆತ್ನಿಸುತ್ತಿರುವುದು ಖಂಡನೀಯ.

ಸುಳ್ಳು ಪ್ರಚಾರದ ಮೂಲಕ ಜನರ ನಡುವೆ ಒಡಕುಂಟು ಮಾಡಲು ಮುಂದಾಗಿರುವುದು ಖೇದಕರ ಎಂದ ಸಂಘಟನೆ ಪದಾಧಿಕಾರಿಗಳು, ಗಣರಾಜ್ಯೋತ್ಸವ ದಿನದಂದು ಹೊಸದಿಲ್ಲಿಯ ರಾಜಪಥದಲ್ಲಿ ಸಾಗುವ ಟ್ಯಾಬ್ಲೋಗಳ ಆಯ್ಕೆಗಾಗಿ ಕೆಲವು ಮಾರ್ಗದರ್ಶಿ ಸೂತ್ರಗಳಿವೆ. ಕೇಂದ್ರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ಸರಕಾರ ನಿರ್ಲಕ್ಷ್ಯ ಮಾಡಿತ್ತು" ಎಂದು ಕಿಡಿಕಾರಿದ್ದಾರೆ.

Edited By : Manjunath H D
Kshetra Samachara

Kshetra Samachara

25/01/2022 02:38 pm

Cinque Terre

3.88 K

Cinque Terre

0

ಸಂಬಂಧಿತ ಸುದ್ದಿ