ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ "ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವುದರೊಂದಿಗೆ ದಿನಾಚರಣೆಯನ್ನು ಆಚರಿಸಲಾಯಿತು .
ಅಧ್ಯಕ್ಷತೆಯನ್ನು ವಹಿಸಿ ಪಂಚಾಯತ ಅಧ್ಯಕ್ಷ ಮನೋಹರ್ ಕೋಟ್ಯಾನ್ ಮಾತನಾಡಿ ಮತದಾನ ಪ್ರಜೆಗಳ ಮೂಲಭೂತ ಹಕ್ಕು ಯಾವುದೇ ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿಯದೆ ಸ್ವತಂತ್ರವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ನಾವು ಅಧಿಕಾರ ಹೊಂದಿದ್ದು ಉತ್ತಮ ಆಡಳಿತಕ್ಕೆ ಬೆಂಬಲ ನೀಡೋಣ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
25/01/2022 06:23 pm