ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಉಸ್ತುವಾರಿ ವಿಷಯದಲ್ಲಿ ನಮ್ಮಲ್ಲಿ ಯಾವ ಅಸಮಾಧಾನವೂ ಇಲ್ಲ: ಸಚಿವ ಅಂಗಾರ

ಉಡುಪಿ: ಉಸ್ತುವಾರಿ ವಿಷಯದಲ್ಲಿ ನಮ್ಮಲ್ಲಿ ಯಾವ ಅಸಮಾಧಾನವೂ ಇಲ್ಲ. ಪಕ್ಷದ ತೀರ್ಮಾನಕ್ಕೆ ನಾವು ಬದ್ಧ.ಉಸ್ತುವಾರಿ ಸಿಗದಿದ್ದರೂ ಚುನಾಯಿತ ಪ್ರತಿನಿಧಿಯಾಗಿ ನನ್ನ ಕೆಲಸ ನಾನು ಮಾಡಲೇಬೇಕು.ನನ್ನ ಕ್ಷೇತ್ರದ ಕೆಲಸದ ಜೊತೆ ಹೆಚ್ಚುವರಿಯಾಗಿ ಉಸ್ತುವಾರಿ ಕೆಲಸ ಮಾಡುತ್ತೇನೆ ಎಂದು ಉಡುಪಿ ಜಿಲ್ಲಾ ನೂತನ ಉಸ್ತುವಾರಿ ಸಚಿವ ಅಂಗಾರ ಹೇಳಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಸಚಿವರು ,ಬಿಜೆಪಿ ಸಚಿವರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ,ಸಂಘಟನೆಯ ವ್ಯವಸ್ಥೆಯಲ್ಲಿ ನಾವೆಲ್ಲ ಅಧಿಕಾರ ಪಡೆದಿದವರು.ನಾವು ಹೇಗೆ ನಡೆದುಕೊಳ್ಳಬೇಕು ಎಂದು ಮೊದಲು ಆಲೋಚಿಸಬೇಕು.ನಾವೇ ಅನಗತ್ಯ ವಿವಾದ ಮಾಡಿದರೆ ಹೊರ ಹೋಗಬೇಕಾಗುತ್ತದೆ.ನಮ್ಮ ತಪ್ಪುಗಳಿಗೆ ಸಂಘಟನೆ ಹೊಣೆ ಯಾಗುವುದಿಲ್ಲ.ಸಂಘಟನೆಗೆ ನಿಷ್ಠರಾಗಿದ್ದರೆ, ಸಂಘಟನೆ ನಮ್ಮ ಕೈ ಬಿಡುವುದಿಲ್ಲ.ಯಾರಾದರೂ ಸಂಘಟನೆ ಕೈಬಿಡುವಂತೆ ವರ್ತಿಸಿದರೆ ನಾವು ಹೊಣೆಗಾರರಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಮುಳುಗುವ ಹಡಗು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಉತ್ತರಿಸಿದ ಅವರು,ಸಿದ್ದರಾಮಯ್ಯ ಏನು ಬೇಕಾದರೂ ಹೇಳಬಹುದು.ಮುಳುಗುವ ಹಡಗು ಸಿದ್ದರಾಮಯ್ಯರದ್ದು.ಯಾಕೆಂದರೆ ಅವರಲ್ಲಿ ಸ್ಪಷ್ಟತೆ ಇಲ್ಲ.ಬಿಜೆಪಿಗೆ ಸ್ಪಷ್ಟತೆ ಇದೆ, ಉದ್ದೇಶ ವಿಚಾರಧಾರೆ ಇದೆ.ಸಿದ್ದರಾಮಯ್ಯ ಮುಳುಗುವ ಸ್ಥಿತಿಯಲ್ಲಿ ಇದ್ದಾರೆ.ಹಾಗಾಗಿ ಎಲ್ಲರೂ ಮುಳುಗಿದಂತೆ ಕಾಣುತ್ತಿರಬಹುದು ಎಂದು ಮಾರ್ಮಿಕವಾಗಿ ಹೇಳಿದರು.

Edited By : Manjunath H D
PublicNext

PublicNext

26/01/2022 12:58 pm

Cinque Terre

33.4 K

Cinque Terre

0

ಸಂಬಂಧಿತ ಸುದ್ದಿ