ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸಂವಿಧಾನ ಶಿಲ್ಪಿಗೆ ಅವಮಾನ; ಜಡ್ಜ್ ವಿರುದ್ಧ ಆಕ್ರೋಶ, ವಜಾಕ್ಕೆ ಪಟ್ಟು

ಮಂಗಳೂರು: ಗಣರಾಜ್ಯೋತ್ಸವ ಆಚರಣೆ ಸಂದರ್ಭ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಸಂವಿಧಾನಕ್ಕೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ತಕ್ಷಣ ಹುದ್ದೆಯಿಂದ ವಜಾ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಆಗ್ರಹಿಸಿದೆ.

ಈ ಸಂದರ್ಭ ಪ್ರತಿಭಟನಾಕಾರರು ಮಾತನಾಡಿ, ರಾಯಚೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಡೆದ 73ನೇ ಗಣರಾಜ್ಯೋತ್ಸವ ಸಂದರ್ಭ ವಿಶ್ವಮಾನ್ಯರಾದ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಸಿ ಅವಮಾನ ಮಾಡಿರುವ ಜಿಲ್ಲಾ ನ್ಯಾಯಾಧೀಶರ ಸಂವಿಧಾನ ವಿರೋಧಿ ಧೋರಣೆ ಖಂಡನೀಯ. ನ್ಯಾಯಾಧೀಶರು ಸಂವಿಧಾನವನ್ನು, ಶಿಷ್ಟಾಚಾರವನ್ನು ಪಾಲನೆ ಮಾಡಿ ಇತರರಿಗೆ ಮಾದರಿಯಾಗಬೇಕು.

ಆದರೆ, ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಅವಮಾನಿಸಿ ವಿಕೃತಿ ಮೆರೆದಿದ್ದಾರೆ. ರಾಜ್ಯಪಾಲರು ಕೂಡಲೇ ಈ ನ್ಯಾಯಾಧೀಶರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ತಾಲೂಕು ಸಂಘಟನಾ ಸಂಚಾಲಕ ಸುರೇಶ್ ಬೆಳ್ಳಾಯರು, ಜಿಲ್ಲಾ ಸಂಘಟನಾ ಸಂಚಾಲಕ ನಾಗೇಶ್ ಚಿಲಿಂಬಿ ಹಾಗೂ ದಲಿತ ಮುಖಂಡರು, ಪ್ರಗತಿಪರ ಚಿಂತಕರು ಭಾಗವಹಿಸಿದ್ದರು.

Edited By : Manjunath H D
Kshetra Samachara

Kshetra Samachara

29/01/2022 11:43 am

Cinque Terre

6.49 K

Cinque Terre

0

ಸಂಬಂಧಿತ ಸುದ್ದಿ