ಬಂಟ್ವಾಳ: ಸದ್ಯ ಪಕ್ಷದ ವರಿಷ್ಠರೊಂದಿಗೆ ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗಿರುವ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತ್ಯಜಿಸುತ್ತಾರೆ ಎಂಬ ಮಾತು ಕೇಳಿಬರುತ್ತಿದ್ದಂತೆಯೇ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ಸಿ.ಎಂ. ಇಬ್ರಾಹಿಂ ಪಕ್ಷದಲ್ಲಿಯೇ ಉಳಿಯುತ್ತಾರೆ. ಪಕ್ಷ ಬಲಪಡಿಸಲು ಹಾಗೂ ಬಿಜೆಪಿಯನ್ನು ಕಿತ್ತೊಗೆಯಲು ಸಹಕಾರ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಬಂಟ್ವಾಳದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರ ಮನೆಗೆ ಭೇಟಿ ನೀಡಿದ ವೇಳೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯು.ಟಿ.ಖಾದರ್, ಸಿ.ಎಂ. ಇಬ್ರಾಹಿಂ ಪಕ್ಷದ ಹಿರಿಯ ನಾಯಕರು. ಅವರು ಪಕ್ಷದಲ್ಲೇ ಇರುತ್ತಾರೆ ಎಂಬ ವಿಶ್ವಾಸ ತನಗಿದೆ. ಸಿ.ಎಂ.ಇಬ್ರಾಹಿಂ ಅವರ ಸೇವೆ ಅಗತ್ಯವಾಗಿದೆ. ನಮ್ಮೆಲ್ಲರ ಉದ್ದೇಶವೇನೆಂದರೆ, ಸಮಾಜಕ್ಕೆ ಮಾರಕವಾದ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಒಂದಂಶದ ಯೋಜನೆ ಎಂದರು.
Kshetra Samachara
31/01/2022 12:44 pm