ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸಿ.ಎಂ. ಇಬ್ರಾಹಿಂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ; ಯು.ಟಿ.ಖಾದರ್

ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿ.ಎಂ. ಇಬ್ರಾಹಿಂ ಹಿರಿಯ ನಾಯಕರು. ಅವರು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ನನ್ನನ್ನು ವಿಧಾನಸಭೆಯ ಉಪನಾಯಕನನ್ನಾಗಿ ಮಾಡಿದ್ದಕ್ಕೂ ಅವರ ಅಸಮಾಧಾನಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ, ಉಳ್ಳಾಲ ಶಾಸಕ ಯು.ಟಿ.ಖಾದರ್ ಪ್ರತಿಕ್ರಿಯಿಸಿದ್ದಾರೆ.

ನಗರದ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಎಂ. ಇಬ್ರಾಹಿಂ ಅವರನ್ನು ಹಿಂದೆಯೂ ಪಕ್ಷ ಗುರುತಿಸಿದೆ. ಮುಂದೆಯೂ ಗುರುತಿಸಲಿದೆ ಎಂದರು. ಪಕ್ಷ ಎಂದಿಗೂ ಡಾ.ಬಿ.ಆರ್.‌ ಅಂಬೇಡ್ಕರ್ ಅವರ ಸಂವಿಧಾನ, ಮಹಾತ್ಮ ಗಾಂಧಿಯವರ ತತ್ವ ಸಿದ್ಧಾಂತಗಳ ಆಧಾರದಲ್ಲಿ ಕಾರ್ಯಾಚರಿಸುತ್ತದೆ. ವಿಧಾನಸಭೆ ಪ್ರತಿಪಕ್ಷ ಉಪನಾಯಕನಾಗಿ ನನ್ನ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಇದು ಸ್ಥಾನಮಾನಕ್ಕಿಂತಲೂ ಹೆಚ್ಚಿನ ಜವಾಬ್ದಾರಿ. ಸರಕಾರದ ವೈಫಲ್ಯಗಳನ್ನು ಇನ್ನಷ್ಟು ಸಮರ್ಥವಾಗಿ ಬಿಂಬಿಸಿ ಹೋರಾಟ ಮಾಡುವ ಜವಾಬ್ದಾರಿ ಎಂದು ಖಾದರ್ ಹೇಳಿದರು.

Edited By : Manjunath H D
PublicNext

PublicNext

31/01/2022 05:17 pm

Cinque Terre

48.9 K

Cinque Terre

3

ಸಂಬಂಧಿತ ಸುದ್ದಿ