ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: "ಬಿಳಿಯೂರು ಅಣೆಕಟ್ಟು ಕಾಂಗ್ರೆಸ್ ಕೊಡುಗೆ, ಬಿಜೆಪಿಯದ್ದಲ್ಲ"

ಪುತ್ತೂರು: ಬಂಟ್ವಾಳ ತಾಲೂಕಿನ ಬಿಳಿಯೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಪಶ್ಚಿಮ ವಾಹಿನಿ ಯೋಜನೆಯ ಬಹುಪಯೋಗಿ ಅಣೆಕಟ್ಟು ಕಾಂಗ್ರೆಸ್ ಸರಕಾರದ ಕೊಡುಗೆಯಾಗಿದ್ದು, ಪುತ್ತೂರು ಶಾಸಕರು ಈ ಯೋಜನೆಯನ್ನು ತಮ್ಮದೆಂದು ಬಿಂಬಿಸುವ ಪ್ರಯತ್ನ ನಿರತರಾಗಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ ತಿಳಿಸಿದ್ದಾರೆ.

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, 2017-18ರಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್‌ ರಾಜ್ಯ ಸರಕಾರ ಬಿಳಿಯೂರು ಹಾಗೂ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಮಧ್ಯೆ ನಿರ್ಮಾಣಗೊಳ್ಳುವ ಅಣೆಕಟ್ಟಿಗೆ 28 ಕೋಟಿ ರೂ. ಅನುದಾನ ನೀಡಿದೆ.

ಅಲ್ಲದೆ, ಆಗಿನ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ , ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮುತುವರ್ಜಿ ಈ ಅಣೆಕಟ್ಟು ನಿರ್ಮಾಣಕ್ಕೆ ಕಾರಣವಾಗಿದೆ. ಆದರೆ, ಪುತ್ತೂರಿನ ಹಾಲಿ ಶಾಸಕ ಸಂಜೀವ ಮಠಂದೂರು ಈ ಅಣೆಕಟ್ಟು ಬಿಜೆಪಿ ಸರಕಾರದ ಕೊಡುಗೆ ಎನ್ನುವ ರೀತಿ ಬಿಂಬಿಸುತ್ತಿದ್ದಾರೆ ಎಂದು ಆರೋಪಿಸಿದರು.

Edited By : Nagesh Gaonkar
Kshetra Samachara

Kshetra Samachara

01/02/2022 06:42 pm

Cinque Terre

10.22 K

Cinque Terre

0

ಸಂಬಂಧಿತ ಸುದ್ದಿ