ಮಂಗಳೂರು: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಆತ್ಮ ನಿರ್ಭರ ಅರ್ಥ ವ್ಯವಸ್ಥೆಯ ಕುರಿತು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರನ್ನು ಉದ್ದೇಶಿಸಿ ಬುಧವಾರ ಮಾತನಾಡಿದರು.
ಇದರ ನೇರಪ್ರಸಾರದ ವೀಕ್ಷಣೆಯನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಮಂಗಳೂರು ಉತ್ತರ ಮಂಡಲದ ಕಾರ್ಯಕರ್ತರು ಶಾಸಕ ಡಾ. ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಪದವಿನಂಗಡಿಯ ಬೆನಕ ಸಭಾ ಭವನದಲ್ಲಿ ವೀಕ್ಷಿಸಿದರು.
ಉತ್ತರ ಮಂಡಲ ಭಾಜಪಾ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಉಪ ಮಹಾಪೌರ ಸುಮಂಗಲಾ, ಜಿಲ್ಲಾ ಕಾರ್ಯದರ್ಶಿ ಪೂಜಾ ಪ್ರಶಾಂತ್ ಪೈ, ಮಂಡಲ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷ ರಾಮ ಮುಗ್ರೋಡಿ, ಮಹಾನಗರ ಪಾಲಿಕೆ ಸದಸ್ಯರು, ಮಂಡಲ ಪದಾಧಿಕಾರಿಗಳು, ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
02/02/2022 08:59 pm