ಉಡುಪಿ: ಹಿಜಾಬ್ ವಿವಾದ ವಿಚಾರವಾಗಿ ಇವತ್ತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಉಸ್ತುವಾರಿ ಸಚಿವ ಎಸ್ ಅಂಗಾರ
ಈ ಕುರಿತು ಜಿಲ್ಲಾಡಳಿತ ಜೊತೆ ಚರ್ಚಿಸುತ್ತೇನೆ.ಒಂದೊಂದು ಕಾಲೇಜಿಗೆ ಒಂದೊಂದು ನಿಯಮ ಮಾಡಲು ಸಾಧ್ಯವಿಲ್ಲ.ಸರಕಾರ ಒಂದು ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಉಡುಪಿಯ ಮಣಿಪಾಲದ ನೂತನ ಕಚೇರಿಯಲ್ಲಿ ಮಾತನಾಡಿದ ಸಚಿವರು ,ಈ ರೀತಿಯ ಗೊಂದಲ ಸೃಷ್ಟಿ ಮಾಡುವುದು ಸರಿಯಲ್ಲ.
ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಈ ಬಗ್ಗೆ ಮನವಿ ಮಾಡುತ್ತೇನೆ.ಯಾರೂ ಕೂಡ ತಮಗೆ ಬೇಕಾದಂತೆ ಕಾಲೇಜಿಗೆ ಬರಲು ಅವಕಾಶವಿಲ್ಲ.ತಜ್ಞರ ಸಮಿತಿಯನ್ನು ಸರ್ಕಾರ ರಚಿಸಿದೆ.
ಜಿಲ್ಲಾಡಳಿತದ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
Kshetra Samachara
03/02/2022 12:09 pm