ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಅಂಬೇಡ್ಕರ್ ಗೆ ಅವಮಾನ, ನ್ಯಾಯಾಧೀಶರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ..

ಪುತ್ತೂರು: ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ರಾಯಚೂರು ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ರನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದ ಅಮರ್ ಜವಾನ್ ಜ್ಯೋತಿ ಬಳಿ ಫೆ. 3 ರಂದು ಪ್ರತಿಭಟನಾ ಸಭೆ ನಡೆಯಿತು.

ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ, ಅಂಬೇಡ್ಕರ್ ಆಪತ್ಬಾಂಧವ ಟ್ರಸ್ಟ್, ಕರ್ನಾಟಕ ಖುಣಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಅಂಬೇಡ್ಕರ್ ಆಪತ್ಬಾಂಧವ ಟ್ರಸ್ಟ್ ನ ಸಂಚಾಲಕ ಜಗದೀಶ್ ಕಜೆ ಉದ್ಘಾಟಿಸಿದರು.

ಸಾಮಾಜಿಕ ವ್ಯವಸ್ಥೆಯಲ್ಲಿ ಎಲ್ಲರಿಂದಲೂ ಗೌರವಕ್ಕೆ ಪಾತ್ರವಾಗಿರುವ ನ್ಯಾಯಾಧೀಶರು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಗೆ ಅವಮಾನಿಸುವ ಮೂಲಕ ಸಂವಿಧಾನಕ್ಕೆ ಅವಮಾನ ಮಾಡಿದ್ದು, ತಕ್ಷಣವೇ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ಅವರು ಇದೇ ಸಂದರ್ಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಒತ್ತಾಯಿಸಿದರು.

Edited By : Shivu K
Kshetra Samachara

Kshetra Samachara

03/02/2022 01:35 pm

Cinque Terre

5.7 K

Cinque Terre

0

ಸಂಬಂಧಿತ ಸುದ್ದಿ