ಮಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
"ಇದೊಂದು ವ್ಯವಸ್ಥಿತ ಷಡ್ಯಂತ್ರ. ಶಾಲೆಯ ಕಾಂಪೌಂಡ್ ತನಕ ಹಿಜಾಬ್, ಬುರ್ಖಾ ಹಾಕಿಕೊಂಡು ಬರಲಿ. ಆದ್ರೆ, ಶಾಲೆ ಒಳಗೆ ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು. ರಾಜ್ಯದ ಶಾಲೆಯಲ್ಲಿ ವಸ್ತ್ರ ಸಂಹಿತೆ ಸಾಂಪ್ರದಾಯಿಕವಾಗಿ ಬಂದಿದೆ. ಕೆಲ ವಿದ್ಯಾರ್ಥಿಗಳನ್ನು ಮುಂದೆ ಬಿಟ್ಟು ಅರಾಜಕತೆ ಸೃಷ್ಟಿ ಮಾಡುವ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ಆದಿಯಾಗಿ ಕೆಲ ಸಂಘಟನೆಗಳು ಹಿಜಾಬ್ ವ್ಯಕ್ತಿ ಸ್ವಾತಂತ್ರ್ಯ ಎಂದು ಹೇಳುತ್ತಿದ್ದಾರೆ.
ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಮಸೀದಿ ಒಳಗೆ ಮಹಿಳೆಯರಿಗೆ ಪ್ರವೇಶ ಕೊಡಲಿ. ಮಹಿಳೆಯರಿಗೆ ಎಲ್ಲೂ ಪ್ರವೇಶ ನೀಡದವರು ಸರ್ಕಾರಿ ಶಾಲೆಯಲ್ಲಿ ಅವರದ್ದೇ ಆದ ಒಂದು ನಿಯಮ ಮಾಡ್ತಾರೆ. ತ್ರಿಬಲ್ ತಲಾಕ್ ರದ್ದು ಮಾಡುವ ಮೂಲಕ ಭದ್ರತೆ ಕೊಟ್ಟಿದ್ದು ಮೋದಿ ಸರ್ಕಾರ. ಇದನ್ನು ಮುಸ್ಲಿಂ ಮಹಿಳೆಯರು ಅರ್ಥ ಮಾಡಿಕೊಳ್ಳಬೇಕು. ಎಸ್.ಡಿ.ಪಿ.ಐ., ಸಿದ್ದರಾಮಯ್ಯ, ಖಾದರ್ ಹೇಳಿಕೆಯಿಂದ ಈ ರೀತಿ ಮಾಡಬೇಡಿ ಎಂದು ಸಚಿವ ಸುನಿಲ್ ಕುಮಾರ್ ಕಿವಿಮಾತು ಹೇಳಿದ್ದಾರೆ.
PublicNext
05/02/2022 12:15 pm