ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 'ಹಿಜಾಬ್' ರಾಜ್ಯ ಸರಕಾರದಿಂದ ಕಟ್ಟುನಿಟ್ಟಿನ ಕ್ರಮ; ನಳಿನ್

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದೆ. ಹಿಜಾಬ್ ನಂತಹ ಯಾವುದೇ ವಿಚಾರಗಳಿಗೆ ಇಲ್ಲಿ ಆಸ್ಪದವಿಲ್ಲ. ನಮ್ಮ ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತದೆ. ಇಂಥಹದ್ದಕ್ಕೆ ಎಲ್ಲೂ ಅವಕಾಶ ನೀಡುವುದಿಲ್ಲ. ಕರಾವಳಿಯನ್ನು ನಾವು ತಾಲಿಬಾನ್ ಮಾಡಲು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿಂದು ಹೇಳಿದರು.

ಶಾಲೆ ಸರಸ್ವತಿ ಮಂದಿರವಾಗಿದ್ದು, ಅಲ್ಲಿ ಶಾಲೆಯ ನಿಯಮ, ಅನುಶಾಸನದೊಂದಿಗೆ ಶಿಕ್ಷಣ ಪಡೆಯುವುದು ಧರ್ಮ. ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ಇದ್ದು, ಯಾರಿಗೆ ಇಂತಹ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ಮನಸ್ಸಿಲ್ಲವೋ ಅವರು ಬೇರೆ ದಾರಿ ಹುಡುಕಿಕೊಳ್ಳಲಿ ಎಂದರು.

ಹಿಜಾಬ್ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆಯನ್ನು ನಾನು ನೋಡಿದ್ದೇನೆ. ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಟಿಪ್ಪುಜಯಂತಿ ನಡೆಸಿ ಸಾಮರಸ್ಯ ಹಾಳು ಮಾಡಿದ್ದರು. ಶಾದಿಭಾಗ್ಯದ ಹೆಸರಿನಲ್ಲಿ ಕೆಲವೇ ಕೆಲವು ಸಮುದಾಯಗಳಿಗೆ ಅವರು. ಯೋಜನೆ ನೀಡಿದ್ದರು. ಈಗ ಹಿಜಾಬ್ ಬಗ್ಗೆ ಮಾತನಾಡುತ್ತಾರೆ. ಈ ಬಗ್ಗೆ ಸಿದ್ದರಾಮಯ್ಯ ಬಹಳ ಎಚ್ಚರಿಕೆಯಿಂದ ಮಾತನಾಡಬೇಕು. ಹಿಜಾಬ್ ವಿಚಾರವೀಗ ನ್ಯಾಯಾಲಯದಲ್ಲಿದೆ. ಅಲ್ಲಿಂದ ಯಾವ ರೀತಿಯ ನಿರ್ದೇಶನ ಬರುತ್ತದೆಂದು ಕಾದು ನೋಡುತ್ತೇವೆ ಎಂದು ನಳಿನ್ ಹೇಳಿದರು.

Edited By : Nagesh Gaonkar
PublicNext

PublicNext

05/02/2022 12:20 pm

Cinque Terre

47.25 K

Cinque Terre

7

ಸಂಬಂಧಿತ ಸುದ್ದಿ