ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವಿದ್ಯಾರ್ಥಿಗಳಿಗೆ ಸಂವಿಧಾನ ಬದ್ಧ ಹಕ್ಕು ನೀಡಿ: ಜಿಲ್ಲಾಧಿಕಾರಿಗಳಿಗೆ ಮನವಿ

ಉಡುಪಿ: ಇತ್ತೀಚಿನ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯ ಕಾಲೇಜು ವಿದ್ಯಾರ್ಥಿನಿಯರಿಗೆ ಸಂವಿಧಾನ ಬದ್ಧ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಶಾಂತಿ ಕದಡುವ ಪ್ರಯತ್ನಗಳು ನಡೆಯುತ್ತಿದ್ದು, ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಸಮವಸ್ತ್ರದೊಂದಿಗೆ ಕೆಲವು ವಿದ್ಯಾರ್ಥಿನಿಯರು ತಮ್ಮ ಸಾಂಪ್ರದಾಯಿಕ ಸಂಕೇತವಾದ ಶಿರವಸ್ತ್ರ ಧರಿಸುತ್ತಿದ್ದ ಕಾರಣಕ್ಕೆ ತರಗತಿ ಪ್ರವೇಶವನ್ನು ನಿರಾಕರಿಸಲಾಗಿದೆ. ಇದು ಸಂವಿಧಾನ ಬದ್ಧ ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ.

ಆದ್ದರಿಂದ ರಾಜ್ಯದ ಎಲ್ಲ ಕಾಲೇಜಿನ ವಿದ್ಯಾರ್ಥಿಗಳಿಗೆ ಅವರ ಸಂವಿಧಾನ ಬದ್ಧ ಹಕ್ಕುಗಳ ಪ್ರಕಾರ ವಿದ್ಯಾಭ್ಯಾಸ ಮಾಡುವ ಅನುಮತಿ ನೀಡಬೇಕು ಎಂದು ಉಡುಪಿಯ ಸಹಬಾಳ್ವೆ ಸಂಘಟನೆ ಇವತ್ತು ಉಡುಪಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಒತ್ತಾಯಿಸಿತು. ಸಂಘಟನೆಯ ಮುಂದಾಳು ಅಮೃತ್ ಶೆಣೈ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

07/02/2022 06:55 pm

Cinque Terre

4.43 K

Cinque Terre

3

ಸಂಬಂಧಿತ ಸುದ್ದಿ