ಕಾಪು: ಬಿಜೆಪಿ ಬಗ್ಗೆ ಜನರಿಗೆ ಭ್ರಮನಿರಸನವಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಯೊಂದಿಗೆ ಮುಂದಿನ ಚುನಾವಣೆಗೆ ತಯಾರಿ ನಡೆಸ ಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಅವರು ಕಾಪು ತೆಂಕ ಎರ್ಮಾಳು ರಾಜೀವ್ ಗಾಂಧಿ ನ್ಯಾಷನಲ್ ಅಕಾಡಮಿ ಆಫ್ ಪೊಲಿಟಿಕಲ್ ಎಜುಕೇಷನ್ ನಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಡಿಜಿಟಲ್ ಸದಸ್ಯತ್ವ ನೋಂದಣಿ ಶಿಬಿರದ ಉದ್ಘಾಟನೆ ಮಾಡಿ ಮಾತನಾಡಿದರು.
ಪಕ್ಷದ ಬಲವರ್ಧನೆಗೆ ಹಾಗೂ ನಾಯಕತ್ವ ಹೊರ ಹೊಮ್ಮಲು ಸದಸ್ಯತ್ವ ಅಭಿಯಾನ ಅತಿ ಅಗತ್ಯ. ಡಿಜಿಟಲ್ ಸದಸ್ಯತ್ವ ಅಭಿಯಾನದ ವೀಕ್ಷಕರಾಗಿ ನೇಮಕಗೊಂಡ ಮುಖಂಡರು ಮುತುವರ್ಜಿಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ನೋಂದಣಿ ಕಾರರಾಗಿ ಆಯ್ಕೆಗೊಂಡವರು ಮನೆ ಮನೆಗೆ ಹೋಗಿ ಸದಸ್ಯತ್ವ ನೋಂದಣಿ ಮಾಡಬೇಕು ಎಂದರು.
ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬಿ.ಎಲ್. ಶಂಕರ್, ಮಂಜುನಾಥ ಭಂಡಾರಿ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್,ಗೋಪಾಲ ಪೂಜಾರಿ, ಹರೀಶ್ ಕುಮಾರ್ ಉಪಸ್ಥಿತರಿದ್ದರು.
PublicNext
07/02/2022 07:10 pm