ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಬಜೆಟ್ ನಲ್ಲಿ ಆರೋಗ್ಯ,ಶಿಕ್ಷಣಕ್ಕೆ ಒತ್ತು ನೀಡಿ: ಎಸ್.ಡಿ.ಪಿ.ಐ.

ಉಡುಪಿ: ಈ ಬಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ಪೂರಕವಾದ ಬಜೆಟ್ ಮಂಡಿಸಬೇಕು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.) ಆಗ್ರಹಿಸಿದೆ.

ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಯಿಂದ ಉನ್ನತ ವ್ಯಾಸಂಗದವರೆಗೂ ಸುಸಜ್ಜಿತ ಕಟ್ಟಡಗಳು, ಮೂಲಭೂತ ಸೌಕರ್ಯಗಳು, ಶಿಕ್ಷಕರ ನೇಮಕಾತಿ, ಪಿಠೋಪಕರಣ ಹಾಗೂ ಆಟೋಪಕರಣಗಳ ವ್ಯವಸ್ಥೆ ಹೀಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಬೇಕು.

ಆರೋಗ್ಯಕ್ಕೆ ಸಂಬಂಧಿಸಿದಂತೆ, ಮಲ್ಟಿಸೇಷಾಲಿಟಿ ಆಸ್ಪತ್ರೆಗಳನ್ನು ಎಲ್ಲ ತಾಲೂಕುಗಳಲ್ಲಿ ಸ್ಥಾಪಿಸಬೇಕು. ಹಾಲಿ ಇರುವ ತಾಲೂಕು ಮತ್ತು ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯ, ಅರೆವೈದ್ಯ ಇನ್ನಿತರ ಸಿಬ್ಬಂದಿ ವರ್ಗದವರನ್ನು ನೇಮಕ ಮಾಡಬೇಕು ಮತ್ತು ಗುತ್ತಿಗೆ ಆಧಾರಿತ ಸಿಬ್ಬಂದಿ ವರ್ಗದವರನ್ನು ಖಾಯಂಗೊಳಿಸಬೇಕು.

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕನಿಷ್ಠ 10 ಸಾವಿರ ಕೋಟಿ ಬಜೆಟ್‌ನಲ್ಲಿ ಮೀಸಲಿಡಬೇಕು ಎಂದು ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ಅತಾವುಲ್ಲಾ ಜೋಕಟ್ಟೆ ಹೇಳಿದರು.ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಂಬಾಗಿಲು ಮತ್ತಿತರರು ಉಪಸ್ಥಿತರಿದ್ದರು

Edited By : Shivu K
Kshetra Samachara

Kshetra Samachara

12/02/2022 05:59 pm

Cinque Terre

5.47 K

Cinque Terre

4