ಉಡುಪಿ: ಈ ಬಾರಿ ಉಡುಪಿ ಜಿಲ್ಲೆಯಲ್ಲಿ ನಡೆಯುವ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಭಾಗವಹಿಸಲಿದ್ದಾರೆ.
ಫೆ. 19ರಂದು ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದಲ್ಲಿ ಸಚಿವರು ಜಿಲ್ಲಾಧಿಕಾರಿಗಳ ಜತೆ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಕೊಕ್ಕರ್ಣೆ ಮತ್ತು ಕಳ್ತೂರು ಗ್ರಾಮಕ್ಕೂ ಭೇಟಿ ನೀಡಿ, ಗ್ರಾಮಸ್ಥರ ಅಹವಾಲು ಸ್ವೀಕರಿಸಲಿದ್ದಾರೆ.
ಕಂದಾಯ ಸಚಿವರೇ ಬರುತ್ತಿರುವುದರಿಂದ ಜಿಲ್ಲಾಧಿಕಾರಿಗಳು ಸಹಿತ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಗ್ರಾಮ ವಾಸ್ತವ್ಯದಲ್ಲಿ ಭಾಗವಹಿಸುವ ಸಾಧ್ಯತೆಯಿದೆ.ಜಿಲ್ಲಾಡಳಿತದ ಗ್ರಾಮ ಸ್ತವ್ಯ ಅಚ್ಚುಕಟ್ಟಾಗಿ ನೆರವೇರಿಸುವ ನಿಟ್ಟಿನಲ್ಲಿ ಶಾಸಕರಾದ ರಘುಪತಿ ಭಟ್ ಅವರು ಈಗಾಗಲೇ ಇಲಾಖೆಯ ಅಧಿಕಾರಿಗಳ ಮಟ್ಟದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಿ, ಸಿದ್ಧತೆ ಆರಂಭಿಸಿದ್ದಾರೆ.
ಕೊರೊನಾದಿಂದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಸರಿಯಾಗಿ ಜಾರಿಯಾಗಿರಲಿಲ್ಲ.ಈಗ ಕೊರೊನಾ ಮೂರನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಪುನಃ ಆರಂಭವಾಗಿದೆ.
Kshetra Samachara
15/02/2022 03:14 pm