ಸುರತ್ಕಲ್: ಸಾಮಾಜಿಕ ಹೋರಾಟಗಾರ ಆಸೀಫ್ ಆಪದ್ಬಾಂಧವ ರವರ ನೇತೃತ್ವದಲ್ಲಿ ನಡೆಯುತ್ತಿರುವ ಎನ್ಐಟಿಕೆ ಅಕ್ರಮ ಟೋಲ್ ಗೇಟ್ ವಿರುದ್ಧದ ಅಹೋರಾತ್ರಿ ಧರಣಿಯು ಮಂಗಳವಾರ ಒಂಬತ್ತನೇ ದಿನಕ್ಕೆ ಕಾಲಿರಿಸಿದೆ.
ಬೆಳಿಗ್ಗೆ ನಡೆದ ಪ್ರತಿಭಟನಾ ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಸದಸ್ಯರು ಸಾಮಾಜಿಕ ಕಾರ್ಯಕರ್ತರು ಧರಣಿ ಸ್ಥಳಕ್ಕೆ ಬಂದು ಆಸೀಫ್ ರಾವ್ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಸಂಜೆ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಬ್ರಿಟಿಷರ ದಬ್ಬಾಳಿಕೆಯನ್ನು ನೆನಪಿಸುವ ಅಣುಕು ಪ್ರದರ್ಶನ ನಡೆಯಿತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್, ಜವಾಹರಲಾಲ್ ನೆಹರು ಸೇರಿದಂತೆ ಬ್ರಿಟಿಷರ ವೇಷಗಳನ್ನು ತೊಟ್ಟು ಸ್ವಾತಂತ್ರ್ಯ ಪೂರ್ವದಲ್ಲಿ ನಡೆಯುತ್ತಿದ್ದ ಆಂಗ್ಲರ ಲೂಟಿ-ದಬ್ಬಾಳಿಕೆಯು ಟೋಲ್ ಗೇಟ್ ರೀತಿಯಲ್ಲಿ ಈಗ ನಡೆಯುತ್ತಿದೆ. ಹೀಗಂತಲೇ ಇಂದು ವಿಭಿನ್ನ ರೀತಿಯಲ್ಲಿ ಪ್ರತಿಭಟಿಸುತ್ತಾ ಆಸೀಫ್ ಆಪತ್ಬಾಂಧವ, ಟೋಲ್ ಗೇಟ್ ದಬ್ಬಾಳಿಕೆ ವಿರುದ್ಧ ಹರಿಹಾಯ್ದರು.
ಈ ಸಂದರ್ಭ ವಿವಿಧ ಸಂಘ-ಸಂಸ್ಥೆಗಳ ನಾಯಕರು ಪ್ರತಿಭಟನೆಯಲ್ಲಿ ಟೋಲ್ ವಿರುದ್ಧ ಘೋಷಣೆ ಕೂಗಿದರು.
Kshetra Samachara
15/02/2022 07:35 pm