ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಫೆ.19 ರಂದು ಕಂದಾಯ ಸಚಿವರ ಗ್ರಾಮ ವಾಸ್ತವ್ಯ: ಪೂರ್ವ ಸಿದ್ಧತೆ ಸಭೆ

ಉಡುಪಿ: ಸರ್ಕಾರ ಹಮ್ಮಿಕೊಂಡಿರುವ "ಸರ್ಕಾರದ ನಡೆ ಹಳ್ಳಿ ಕಡೆಗೆ" ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಆರ್. ಅಶೋಕ್ ಫೆ. 19 ರಂದು ಆರೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಅಲ್ಲಿಂದ ಕೊಕ್ಕರ್ಣೆಯಲ್ಲಿ ಸಚಿವರು ಜನಸ್ಪಂದನಾ ಕಾರ್ಯಕ್ರಮ ನಡೆಸಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಬಳಿಕ ಕಳ್ತೂರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕ ಕೆ. ರಘುಪತಿ ಭಟ್ ಇಂದು ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಪೂರ್ವಸಿದ್ಧತೆಗಳನ್ನು ವೀಕ್ಷಿಸಿದರು. ಈ ಸಂದರ್ಭ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

17/02/2022 07:23 pm

Cinque Terre

9.3 K

Cinque Terre

0

ಸಂಬಂಧಿತ ಸುದ್ದಿ