ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ಕೆಂಪುಕೋಟೆ ಮೇಲೆ ಧ್ವಜ ಹಾರಿಸುವ ಕುರಿತು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಬಂಟ್ವಾಳ ಕಾಂಗ್ರೆಸ್ ನಾಯಕರು ಆಕ್ರೋಶಿತರಾಗಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ ರಸ್ತೆಯ ಫ್ಲೈ ಓವರ್ ಪಕ್ಕದಲ್ಲಿ ಮಾಜಿ ಸಚಿವ ಬಿ.ರಮಾನಾಥ್ ರೈ ನೇತೃತ್ವದಲ್ಲಿ ಈಶ್ವರಪ್ಪ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು.

ಸ್ವಾತಂತ್ರ್ಯ ಹೋರಾಟದ ಅರ್ಥವೇ ಗೊತ್ತಿಲ್ಲದ ಬಿಜೆಪಿ ಮತ್ತು ಸಂಘ ಪರಿವಾರ ಸದಾ ಇಂಥ ಕೆಲಸ ಮಾಡುತ್ತಾ ಬಂದಿದೆ. ಪ್ರತಿ ಬಾರಿಯೂ ಈಶ್ವರಪ್ಪ ವಿವಾದಕ್ಕೆಡೆಮಾಡುವ ಹೇಳಿಕೆಗಳನ್ನು ನೀಡಿದ್ದು, ಇನ್ನೂ ಮುಂದುವರಿದಿದೆ. ಅವರು ರಾಜೀನಾಮೆ ಕೊಡುವವರೆಗೆ ಹೋರಾಟ ನಡೆಯಲಿದೆ ಎಂದು ರೈ ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸವಿತಾ ರಮೇಶ್ ಮಾತನಾಡಿ, ಸಚಿವ ಈಶ್ವರಪ್ಪನವರು ತಮ್ಮ ಘನತೆಯನ್ನು ಮರೆತು ಧರ್ಮ, ಕೇಸರಿ ಧ್ವಜದ ಕುರಿತು ಮಾತನಾಡುವ ಸಂದರ್ಭ ರಾಷ್ಟ್ರಧ್ವಜವನ್ನು ಅಪಮಾನಿಸಿದ್ದು, ದೇಶಪ್ರೇಮಿಗಳಾದ ನಾವೆಲ್ಲರೂ ಖಂಡಿಸಬೇಕು ಎಂದರು.

ಪ್ರತಿಭಟನೆಯಲ್ಲಿ ಜಿ.ಪಂ ಮಾಜಿ ಸದಸ್ಯ ಎಂ.ಎಸ್.ಮಹಮ್ಮದ್ ಹಾಗೂ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಮಾತನಾಡಿ ಈಶ್ವರಪ್ಪ ಹೇಳಿಕೆಯನ್ನು ಖಂಡಿಸಿದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ಕುಮಾರ್ ಶೆಟ್ಟಿ ಮತ್ತಿತರರು ಇದ್ದರು.

Edited By : Manjunath H D
Kshetra Samachara

Kshetra Samachara

18/02/2022 10:22 am

Cinque Terre

7.51 K

Cinque Terre

2

ಸಂಬಂಧಿತ ಸುದ್ದಿ